Saturday, November 21, 2026

ಪ್ರಾಯೋಗಿಕ ಆವೃತ್ತಿ

ಇಮ್ಮಡಿ ಪುಲಿಕೇಶಿ ಸ್ಮರಣೆ ಮತ್ತು ಕದಂಬ ರತ್ನ ಪ್ರಶಸ್ತಿ ಪ್ರದಾನ

ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ಕನ್ನಡ ನಾಡಿನ ಚಾಲುಕ್ಯ ಚಕ್ರವರ್ತಿ ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ ಸ್ಮರಣೆ ಹಾಗೂ ಕದಂಬ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವು ಮಂಡ್ಯ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಭವನದಲ್ಲಿ ನಡೆಯಿತು.

ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕದಂಬ ಸೈನ್ಯವನ್ನು ಮೊದಲಿನಂದಲೂ ನೋಡುತ್ತಿದ್ದೇನೆ. ಇವರ ಕಾರ್ಯವೈಖರಿ ಅತ್ಯುತ್ತಮವಾಗಿದೆ.ಅವರ ಸಮಾಜಮುಖಿ ಕಾರ್ಯಗಳು ಮತ್ತಷ್ಟು ಮುಂದುವರಿಯಲಿ ಎಂದು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ನಾಡೋಜ ಪುರಸ್ಕೃತರಾದ ಧಾರ್ಮಿಕ ಚಿಂತಕ ನಾಡೋಜ ಡಾ. ಭಾಷ್ಯಂ ಸ್ವಾಮೀಜಿ ಅವರಿಗೆ ಕದಂಬ ಕನ್ನಡ ಸಾಮ್ರಾಟ್ ಚಾಲುಕ್ಯ ದಕ್ಷಿಣಾಪಥೇಶ್ವರ ಪ್ರಶಸ್ತಿ ಪುರಸ್ಕಾರ ನೀಡಿ ಗಣ್ಯರು ಅಭಿನಂದಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ನಾಡೋಜ ಪ್ರಶಸ್ತಿ ಸಾಮಾನ್ಯವಾದ ಪ್ರಶಸ್ತಿಯಲ್ಲ. ಅಂತಹ ಮಹತ್ತರವಾದ ಪ್ರಶಸ್ತಿಯನ್ನು ಪಡೆದಿರುವುದು ಸಂತಸ ತಂದಿದೆ.ಇಂದು ಕದಂಬ ಸೈನ್ಯ ಸಂಘಟನೆ ಪ್ರಶಸ್ತಿ ಪಡೆದಿರುವುದು ಮತ್ತಷ್ಟು ಕ್ರಿಯಾಶೀಲರಾಗಲು ಪುಷ್ಟಿ ನೀಡಿದೆ ಎಂದರು.

ವೇದಿಕೆಯಲ್ಲಿ ಕಾಂಗ್ರೆಸ್‌ ಮುಖಂಡ ಡಾ.ಕೃಷ್ಣ, ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ನೌಕರರ ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿ, ಕಾಂಗ್ರೆಸ್‌ ಮುಖಂಡ ರುದ್ರಪ್ಪ, ಕದಂಬ ಸೇನೆಯ ಶಿವಕುಮಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ