87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಾರ್ಥ ವಾಗಿ ಹೊರತಂದಿರುವ “ಬೆಲ್ಲದಾರತಿ” ಸ್ಮರಣ ಸಂಚಿಕೆಯನ್ನು ಆಗಸ್ಟ್ 24 ರಂದು ಮಧ್ಯಾಹ್ನ 3 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ವಿಜೃಂಬಣೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಸ್ಮರಣ ಸಂಚಿಕೆ ಸಮಿತಿಯ ಅಧ್ಯಕ್ಷರೂ ಆದ ಮಂಡ್ಯ ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ತಿಳಿಸಿದ್ದಾರೆ.
“ಬೆಲ್ಲದಾರತಿ” ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು ಚನ್ನಬಸಪ್ಪ, ಆದಿಚುಂಚನಗಿರಿ ಮಹಾಸಂಸ್ಥಾನದ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಶಾಲಾ ಕಾಲೇಜುಗಳ ಕನ್ನಡ ಶಿಕ್ಷಕರು, ಕನ್ನಡ ಪ್ರೇಮಿಗಳು, ಕನ್ನಡ ಸಾಹಿತ್ಯಾಸಕ್ತರು, ಕನ್ನಡ ಪರ ಹೋರಾಟಗಾರರು, ಕನ್ನಡ ಸಾಹಿತಿಗಳು, ಕನ್ನಡ ವಿದ್ವಾಂಸರು, ಕನ್ನಡ ಸಾಹಿತ್ಯ ಪರಿಷತ್ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರಿದ್ದಾರೆ.




