ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ತೇಜೋವಧೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಪೋಸ್ಟ್ ಶೇರ್ ಮಾಡಿರುವ ಆರೋಪದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ನೂರಾರು ಪೊಲೀಸರು ಅವರ ನಿವಾಸಕ್ಕೆ ಆಗಮಿಸಿದ್ದಾರೆ.
ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೇಸ್ಬುಕ್ ಪೇಜ್ನಲ್ಲಿ ವಿಡಿಯೊ ಮಾಡಿ ಮಹೇಶ್ ಶೆಟ್ಟಿ ಅವರು ಸಂತೋಷ್ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ 196(1), 352 353(2) ಬಿಎನ್ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸ್ ಠಾಣಾ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಸೂಚಿಸಿದ್ದರು ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ಬೆಳಿಗ್ಗೆ ನೂರಾರು ಪೊಲೀಸರು ಬಂಧಿಸಲು ಆಗಮಿಸಿದರು.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಬಂದ ಪೊಲೀಸರುನ್ನು ಗಿರೀಶ್ ಮಟ್ಟಣ್ಣನವರ್ ಮತ್ತು ತಿಮರೋಡಿ ಪರ ವಕೀಲರು ತಡೆದರು ನಮ್ಮ ಖಾಸಗಿ ವಾಹನದಲ್ಲಿ ವಿಚಾರಣೆಗೆ ಕರೆ ತರುತ್ತೇವೆ ಎಂದು ಪೊಲೀಸರಿಗೆ ಮನವರಿಕೆ ಮಾಡಿದರು. ಒಂದಿಷ್ಟು ಹೊತ್ತು ವಕೀಲರು ಮತ್ತು ಪೊಲೀಸರ ನಡುವೆ ವಾಗ್ವಾದವೂ ನಡೆಯಿತು.
ಸದ್ಯದ ಮಾಹಿತಿ ಪ್ರಕಾರ ಗಿರೀಶ್ ಮಟ್ಟಣ್ಣನವರ್ ಅವರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಖಾಸಗಿ ವಾಹನದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತಿಮರೋಡಿ, ‘ನನ್ನ ಜೀವಕ್ಕೆ ಅಪಾಯವಾದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿದರು




