Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | 5,000 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ

2025- 26 ನೇ ಸಾಲಿನಲ್ಲಿ 5000 ಬೀದಿ ನಾಯಿಗಳಿಗೆ ಸಂತನಾಹರಣ ಚಿಕಿತ್ಸೆ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣ (ಎ.ಬಿ.ಸಿ ಮತ್ತು ಎ.ಆರ್.ವಿ) ನೀಡುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ 21 ನೇ ಜಾನುವಾರು ಗಣತಿಯನ್ವಯ 24,615 ಸಾಕು ನಾಯಿಗಳು ಹಾಗೂ 51,531 ಬೀದಿ ನಾಯಿಗಳು ಸೇರಿ ಒಟ್ಟು 76,146 ನಾಯಿಗಳಿವೆ ಎಂದರು.

ಈ ಬಾರಿ ಮಂಡ್ಯ ನಗರಸಭೆಯಲ್ಲಿ 60 ಲಕ್ಷ ರೂ ಹಣವನ್ನು ಬೀದಿ ನಾಯಿಗಳ ಸಂತನಾಹರಣ ಚಿಕಿತ್ಸೆಗಾಗಿ ಮೀಸಲಿಡಲಾಗಿದೆ. ಸ್ಥಳೀಯ ಸಂಸ್ಥೆಗಳು ತಮ್ಮ ಆಯವ್ಯಯದಲ್ಲಿ ಶೇ 2 ರಷ್ಟು ಹಣವನ್ನು ಬೀದಿನಾಯಿಗಳಿಗೆ ಎ.ಬಿ.ಸಿ ಹಾಗೂ ಎ.ಆರ್.ವಿ ಚಿಕಿತ್ಸೆಗೆ ಮೀಸಲಿಡಲು ಅವಕಾಶವಿದೆ. ಪಶು ಸಂಗೋಪನೆ ಇಲಾಖೆ ಅವರು ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಹಣ ಮೀಸಲಿಡಲು ಕ್ರಮ ವಹಿಸಿ ಎಂದರು.

ಶಾಲಾ ವಿದ್ಯಾರ್ಥಿಗಳಿಗೆ ಬೀದಿ ನಾಯಿ ಅಥವಾ ನಾಯಿ ಕಡಿತಕ್ಕೆ ಒಳಗಾದರೆ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ. ಪ್ರಾಣಿಗಳನ್ನು ಕೆಣಕುವ ಕೃತ್ಯಗಳನ್ನು ಮಾಡಬಾರದು ಎಂಬುದನ್ನು ಸಹ ತಿಳಿಸಿ ಎಂದರು.

ಬೀದಿ ನಾಯಿ ಕಡಿತಕ್ಕೆ ಒಳಗಾಗಿರುವವರ‌ ಅಂಕಿ ಅಂಶಗಳು ಸರಿಯಾಗಿ ತಾಳೆಯಾಗುತ್ತಿಲ್ಲ. ಕಡಿತಕ್ಕೆ ಒಳಗಾಗಿರುವವರಿಗೆ ನೀಡಲಾಗುವ ಡೋಸ್ ಗಳು ಹಾಗೂ ವ್ಯಕ್ತಿಗಳ ಸಂಖ್ಯೆಯನ್ನು ತಾಳೆ ಮಾಡಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

2023-24 ನೇ ಸಾಲಿನಲ್ಲಿ ಜಿಲ್ಲೆಯ ಬರ ಪರಿಸ್ಥಿಯಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲು ಮುಂಜಾಗ್ರತ ಕ್ರಮವಾಗಿ ಖರೀದಿಸಲಾಗಿದ್ದು ಒಂದು ವರ್ಷ ಕಳೆದಿರುವುದರಿಂದ ಒಣ ಮೇವು ಹಾಳಾಗುವು ಸಂಭವವಿರುವುದರಿಂದ ಈ ಕುರಿತಂತೆ ಪ್ರಕಟಣೆ ನೀಡಿ ರೈತರಿಗೆ ಖರೀದಿಸಲು‌ ಅವಕಾಶ ಕಲ್ಪಿಸಿಕೊಡಿ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಹೆಚ್ಚು ಬೀದಿ ನಾಯಿಗಳು ಇರುವ ಸ್ಥಳಗಳನ್ನು ಗುರುತಿಸಿ ಸದರಿ ವ್ಯಾಪ್ತಿಯ ಗ್ರಾಮ ಪಂಚಾಯತಿಯ ಆಯ- ವ್ಯಯದಲ್ಲಿ ಎ.ಬಿ.ಸಿ ಹಾಗೂ ಎ.ಆರ್.ವಿ ಚಿಕಿತ್ಸೆಗೆ ಹಣ ಮೀಸಲಿದೆ. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಕುರಿತಂತೆ ಯೋಜನೆ ರೂಪಿಸಿ ಎಂದರು.

ಕಸಾಯಿ ಖಾನೆ, ಪ್ರವಾಸಿ ಸ್ಥಳಗಳು, ಆರತಿ ಉಕ್ಕಡ, ಆದಿ ಚುಂಚನಗಿರಿ ಸೇರಿದಂತೆ ಬೀದಿ ನಾಯಿಗಳಿಗೆ ಹೆಚ್ಚು ಆಹಾರ ಸಿಗುವ ಸ್ಥಳಗಳನ್ನು‌ ಗುರುತಿಸಿ. ಬೀದಿ ನಾಯಿಗಳು ಹೆಚ್ಚಿರುವ ಸ್ಥಳಗಳಲ್ಲಿ ಎ.ಬಿ.ಸಿ ಹಾಗೂ ಎ.ಆರ್.ವಿ ಚಿಕಿತ್ಸೆಗೆ ಆದ್ಯತೆ ನೀಡಿ ಕ್ರಮ ಕೈಗೊಳ್ಳಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಶಿವಲಿಂಗಯ್ಯ, ಪಶುವೈದ್ಯ ಡಾ.ಪ್ರವೀಣ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ