ದಲಿತ ಸಾಹಿತ್ಯ ಪರಿಷತ್ ತಾಲೂಕು ಘಟಕ ಮದ್ದೂರು ವತಿಯಿಂದ ಕೊಡ ಮಾಡುವ ದಲಿತ ಸಾಹಿತ್ಯ ರತ್ನ ಪ್ರಶಸ್ತಿಗೆ ಲೇಖಕರಾದ ಡಾ.ಹೊಂಬಯ್ಯ ಹೊನ್ನಲಗೆರೆ, ಬಿ.ಎಲ್.ಮಧುಸೂದನ ಮತ್ತು ಸರೋಜಮ್ಮ ಅವರು ಭಾಜನರಾಗಿದ್ದಾರೆ ಎಂದು ತಾಲೂಕು ದಲಿತ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದ್ದೂರು ತಾಲೂಕು ದಲಿತ ಸಾಹಿತ್ಯ ಪರಿಷತ್ ಘಟಕ ಉದ್ಘಾಟನೆ ಮತ್ತು ಸಾಮಾಜಿಕ ಚಳುವಳಿಯ ನೇತಾರ ನಾರಾಯಣ ಗುರು ಜಯಂತಿಯ ಅಂಗವಾಗಿ ಆ.30ರಂದು ಮದ್ದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿರುವ ಉದ್ಘಾಟನಾ ಸಮಾರಂಭದಲ್ಲಿ ಮದ್ದೂರು ತಾಲೂಕಿನ ಸಾಹಿತಿಗಳಿಗೆ ದಲಿತ ಸಾಹಿತ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಣಿ ಐಶ್ವರ್ಯ ಡೆವಲಪರ್ ಮಾಲೀಕಎಚ್.ಎಲ್. ಸತೀಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪರಿಷತ್ತಿನ ಜಿಲ್ಲಾ ಗೌರವಾಧ್ಯಕ್ಷ ಚಂದ್ರಶೇಖರನ್ ಉದ್ಘಾಟಿಸುವರು, ತಾಲೂಕು ಗೌರವಾಧ್ಯಕ್ಷ ಹನುಮಂತರಾಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹುರುಗಲವಾಡಿ ರಾಮಯ್ಯ ನಾಮಪಲಕ ಅನಾವರಣ ಮಾಡುವರು. ನಾರಾಯಣ ಗುರು ಅವರ ಬಗ್ಗೆ ವಿಚಾರ ಮಂಡನೆಯನ್ನು ಬಿ.ವಿ.ಹಳ್ಳಿ ನಾರಾಯಣ್ ಮಾಡಲಿದ್ದಾರೆ. ತಾ.ಪಂ. ಇಓ ರಾಮಲಿಂಗಯ್ಯ ಪುಷ್ಪಾರ್ಚನೆ ಮಾಡುವರು.
ಮುಖ್ಯ ಅತಿಥಿಗಳಾಗಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕುಮಾರಿ ವನಿತಾ, ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ, ಸಮಾಜ ಕಲ್ಯಾಣಾಧಿಕಾರಿ ನಾಗರಾಜ್ ಹಾಗೂ ಪದಾಧಿಕಾರಿಗಳು, ಸದಸ್ಯರು ಮತ್ತು ಇತರರು ಭಾಗವಹಿಸಲಿದ್ದಾರೆ .




