Thursday, November 19, 2026

ಪ್ರಾಯೋಗಿಕ ಆವೃತ್ತಿ

ಅಭಿವೃದ್ಧಿಗೆ ಪೂರಕ ಯೋಜನಾ ವರದಿ ಸಿದ್ಧಪಡಿಸಿ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಚಿಂತಿಸಿ ತೊಂದರೆಯಿರುವ ಕ್ಷೇತ್ರಗಳನ್ನು ಗುರುತಿಸಿ, ಅವುಗಳನ್ನು ಸರಿಪಡಿಸಲು ಪೂರಕವಾಗಿ ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.ಮಂಡ್ಯ ನಗರಸಭೆಗೆ ಹೊಂದುಕೊಂಡಿರುವ ಗ್ರಾಮ ಪಂಚಾಯತಿಗಳನ್ನು ನಗರಸಭೆಯ ವ್ಯಾಪ್ತಿಗೆ ತಂದು ಅಭಿವೃದ್ಧಿ ಪಡಿಸಬೇಕಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ 24×7 ಪ್ರತಿ ದಿನ ಕುಡಿಯುವ ನೀರು ಒದಗಿಸುವ ಬಗ್ಗೆ ಯೋಜನೆ ರೂಪಿಸಿ.ಇದಲ್ಲದೇ ಮಂಡ್ಯ ನಗರದ ಹೊರವಲಯದಲ್ಲಿ ರಿಂಗ್ ರೋಡ್ ರೂಪಿಸುವ ಬಗ್ಗೆ ಚಿಂತಿಸಬೇಕಿದೆ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಮಾತನಾಡಿ ಖಾಸಗಿ ಲೇಔಟ್ ಗಳಿಗೆ ಅನುಮತಿ ನೀಡುವ ಮೊದಲು ನಗರ ಯೋಜನಾಧಿಕಾರಿಗಳು ರಸ್ತೆ, ಚರಂಡಿ ಇನ್ನಿತರ ಮೂಲಭೂತ ವ್ಯವಸ್ಥೆಗಳಿಗೆ ಸ್ಥಳಾವಕಾಶ ಮಾಡಿಕೊಂಡಿರುವುದನ್ನು ಪರಿಶೀಲಿಸಬೇಕು ಎಂದರು.

ಮಂಡ್ಯ ನಗರ ಸಭೆ ಅಧ್ಯಕ್ಷ ಪ್ರಕಾಶ್ ಮಾತನಾಡಿ ಕೆಲವು ಮುಡಾ ಲೇಔಟ್ ಗಳನ್ನು ನಗರಸಭೆ ವ್ಯಾಪ್ತಿಗೆ ತರಬೇಕಿದೆ. ರಾಜಕಲುವೆಗಳನ್ನು ಉಳಿಸಿಕೊಂಡು ಅಭಿವೃದ್ಧಿ ಪಡಿಸಬೇಕಿದೆ. ನಗರದ ಸುಂದರೀಕರಣಕ್ಕೆ ಹೊಸ ಯೋಜನೆಗಳನ್ನು ರೂಪಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಮಾತನಾಡಿ ಮಾನವ ಅಭಿವೃದ್ಧಿ ವರದಿಯನ್ನು ಅಧ್ಯಯನ ಮಾಡಿ ಸಿದ್ದಪಡಿಸಲು ಮೈಸೂರು ವಿಶ್ವವಿದ್ಯಾನಿಲಯದೊಂದಿಗೆ ಎಂ.ಒ.ಯು ಮಾಡಿಕೊಳ್ಳಬೇಕಿದೆ ಎಂದರು.

ಮಂಡ್ಯ ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಮುಖ್ಯವಾಗಿ ಕೃಷಿ, ಆರೋಗ್ಯ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆ ಯವರಿಗೆ ಮೂಲದಲ್ಲಿ ಇರುವ ಸಮಸ್ಯೆಗಳು ಹಾಗೂ ಅದನ್ನು ಪರಿಹರಿಸಲು ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ