Tuesday, November 24, 2026

ಪ್ರಾಯೋಗಿಕ ಆವೃತ್ತಿ

ಗ್ಯಾರಂಟಿ ಯೋಜನೆಗೆ ಎಸ್ಸಿಎಸ್ಪಿ, ಟಿಎಸ್ಪಿ ಹಣ ಬಳಕೆ : ಖಂಡನೆ

ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದಲ್ಲಿ 13 ಸಾವಿರ ಕೋಟಿ ರೂಗಳನ್ನು ಬಳಕೆ ಮಾಡಲು ರಾಜ್ಯದ ಕಾಂಗ್ರೆಸ್ ಸರಕಾರ ಮುಂದಾಗಿರುವುದು ಖಂಡನೀಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವನ್ನಾಳಿದ ಎಲ್ಲಾ ಪಕ್ಷಗಳ ಸರಕಾರಗಳು ಪರಿಶಿಷ್ಠರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಇತರ ಯೋಜನೆಗಳಿಗೆ ಬಳಸಿಕೊಳ್ಳುತ್ತಿವೆ. ಇದರಿಂದ ಪರಿಶಿಷ್ಠ ಸಮುದಾಯಗಳು ಯಾವೊಂದು ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹಿಂದುಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

2013ರಲ್ಲಿ ದಲಿತರ ಅಭಿವೃದ್ದಿಗಾಗಿ ಬಜೆಟ್‌ನಲ್ಲಿ ಅನುದಾನ ಮೀಸಲಿಡಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಉಪಯೋಜನೆ ಕಾಯ್ದೆ ನೆಪಮಾತ್ರಕ್ಕೆ ಜಾರಿ ಮಾಡಿತು. ಆದರೆ ಕಲಂ 7(ಸಿ) ಮತ್ತು 7(ಡಿ)ಗಳನ್ನು ಸೇರಿಸಿ ದಲಿತ ಸಮುದಾಯಕ್ಕೆ ಅನ್ಯಾಯ ಎಸಗಿದೆ ಎಂದು ಆರೋಪಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೈ.ಸುರೇಶ್‌ಕುಮಾರ್, ತಾಲೂಕು ಅಧ್ಯಕ್ಷರಾದ ಮುತ್ತುರಾಜ್, ಕರಿಯಪ್ಪ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ