Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮನ್ ಮುಲ್ | ಸೆ.12 ಕ್ಕೆ ಹಾಲು ಉತ್ಪಾದಕರ ವಾರ್ಷಿಕ ಸಾಮಾನ್ಯ ಸಭೆ

“ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಮನ್ ಮುಲ್) ಹಾಲು ಉತ್ಪನ್ನ ಘಟಕ, ಗೆಜ್ಜಲಗೆರೆ ಕಚೇರಿ ಆವರಣ” ದಲ್ಲಿ ಸೆಪ್ಟೆಂಬರ್ 12 ರಂದು ಬೆಳಗ್ಗೆ 10:25 ಗಂಟೆಗೆ ಒಕ್ಕೂಟದ ಅಧ್ಯಕ್ಷರಾದ ಯು.ಸಿ. ಶಿವಕುಮಾರ್(ಶಿವಪ್ಪ ಉಮ್ಮಡಹಳ್ಳಿ) ಅಧ್ಯಕ್ಷತೆಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ವಾರ್ಷಿಕ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ.

ಈ ಸಭೆಗೆ ಸದಸ್ಯ ಸಂಘಗಳ ಪ್ರತಿನಿಧಿಗಳು ವಾರ್ಷಿಕ ಸಾಮಾನ್ಯ ಸಭೆಗೆ ಸಕಾಲದಲ್ಲಿ ಹಾಜರಾಗಬೇಕಾಗಿ ಕೋರಿದೆ. ಪೂರ್ಣ ವಿವರಗಳನ್ನೊಳಗೊಂಡ ವಾರ್ಷಿಕ ಸಾಮಾನ್ಯ ಸಭೆಯ ನೋಟೀಸನ್ನು ಎಲ್ಲಾ ಸದಸ್ಯ ಸಂಘಗಳಿಗೂ ಅಂಚೆ ಮೂಲಕ ಈಗಾಗಲೇ ಕಳುಹಿಸಲಾಗಿದೆ.

ಅಂಚೆ ಮೂಲಕ ನೋಟೀಸು ತಲುಪದೇ ಇದ್ದ ಪಕ್ಷದಲ್ಲಿ ಪತ್ರಿಕಾ ಪ್ರಕಟಣೆಯನ್ನು ಅಧಿಕೃತ ನೋಟಿಸ್ ಎಂದು ಪರಿಗಣಿಸುವುದು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರತಿನಿಧಿಗಳು ಕಡ್ಡಾಯವಾಗಿ ಸಂಘದ ನಿರ್ಣಯದ ಪ್ರತಿಯೊಂದಿಗೆ ಹಾಜರಾಗುವಂತೆ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ