Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಸರಗಳ್ಳನ ಬಂಧನ ; 7 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳ ವಶ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ ವಿವಿಧಡೆ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಳ್ಳೂರು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ 69 ಗ್ರಾಂ. ತೂಕದ ಚಿನ್ನದ ಸರಗಳ ವಶಪಡಿಸಿಕೊಂಡಿದ್ದಾರೆ.

ಗಾರೆ ಕೆಲಸ ಮತ್ತು ತಲೆ ಕೂದಲು ವ್ಯಾಪಾರ ಮಾಡುತ್ತಿದ್ದ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಭೂತೇಶ್ವರ ನಗರ (ಭೂತಪ್ಪನಗುಡಿ)ದ  ತಿಪ್ಪೇಶ ಅಲಿಯಾಸ್ ಭರತ್ ಬಿನ್ ಹನುಮಂತಪ್ಪ (33 ವರ್ಷ) ಪೊಲೀಸರಿಗೆ ಸಿಕ್ಕಿ ಬಿದ್ದವನು.

ಏನಿದು ಘಟನೆ

ಕಳದರೆ ಅಗಸ್ಟ್ 15ರಂದು ಬೆಳಿಗ್ಗೆ 10.30 ರ ಸಮಯದಲ್ಲಿ ನಾಗಮಂಗಲ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದ ಕಿರಣ್ ಕುಮಾರ್ ಎಂಬಾತ ತನ್ನ ಡಿಯೋ ಹೊಂಡಾ ಬೈಕ್‌ನಲ್ಲಿ ಬೆಳ್ಳೂರು ಕ್ರಾಸ್ ಕಡೆಗೆ ಬರುತ್ತಿದ್ದಾಗ ಸಮೃದ್ಧಿ ಹೋಟೆಲ್ ಎದುರು ಹಿಂದಿನಿಂದ ಬಂದ ಬೈಕ್ ಸವಾರ ಕತ್ತಿನಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ದೂರು ನೀಡಿದ್ದರು.

ಈ ಪ್ರಕರಣದ ಆರೋಪಿತರ ಪತ್ತೆಗೆ ನಾಗಮಂಗಲ ವೃತ್ತ ಸಿಪಿಐ ನಿರಂಜನ ಕೆ.ಎಸ್.ಬೆಳ್ಳೂರು ಠಾಣಾ ಪಿ.ಎಸ್.ಐ ವೈ.ಎನ್.ರವಿಕುಮಾರ್, ಸಿಹೆಚ್’ಸಿಯರವರಾದ ಪ್ರಶಾಂತ್ ಕುಮಾರ್, ಇಂದ್ರಕುಮಾರ್, ಮಧುಕುಮಾರ್, ರವಿಕಿರಣ್, ಲೋಕೇಶ್, ಸಿಪಿಸಿಯರವರಾದ ಶಂಕರ್‌ನಾಯ್ಕ, ದಿನೇಶ, ಕಿರಣ್ ಕುಮಾರ್, ಪ್ರಕಾಶ್, ಸಿದ್ದಪ್ಪ ರವನ್ನೊಗಳಗೊಂಡ ತಂಡ ರಚನೆ ಮಾಡಲಾಗಿತ್ತು.

ಈ ತಂಡತುತ ಆ.28ರಂದು ಮದ್ಯಾಹ್ನ 4 ಗಂಟೆ ಸಮಯದಲ್ಲಿ ನಾಗಮಂಗಲ ತಾಲ್ಲೂಕು ಚಂದ್ರಶೇಖರಪುರ ಗ್ರಾಮದ ಹತ್ತಿರವಿದ್ದ ಆರೋಪಿಯನ್ನು ಬಂಧಿಸಿದೆ. ಅಲ್ಲದೇ ಆತ ಕೃತ್ಯವೆಸಗಲು ಬಳಸಿದ ಬೈಕನ್ನು ವಶಕ್ಕೆ ಪಡೆದಿದೆ. ಈತನ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.

ಬೆಳ್ಳೂರು ಪೊಲೀಸ್ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ