Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಕಲ್ಲುತೂರಾಟದಲ್ಲಿ ಹಿಂದೂ ಪರ ಸಂಘಟನೆ ಭಾಗಿ : ಗೃಹ ಸಚಿವ ಪರಮೇಶ್ವರ್

ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಕಲ್ಲು ತೂರಾಟ ನಡೆಸಿದವರ ಜತೆ ಹಿಂದೂ ಪರವಾದ ಸಂಘಟನೆಯವರು ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ತುಮಕೂರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ಅದರಲ್ಲಿ ಯಾರೆಲ್ಲ ಸೇರಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಗೊತ್ತಿಲ್ಲ. ಹಿಂದೂ ಪರವಾದ ಸಂಘಟನೆಯವರು ಎಂದು ಪೊಲೀಸರು ಹೇಳುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಕಾಂಶ ಗೊತ್ತಾಗಲಿದೆ’ ಎಂದು ತಿಳಿಸಿದರು.

ಶಾಂತಿ ಕಾಪಾಡಲು ಪೊಲೀಸರು ಒಂದು ಹಂತದವರೆಗೆ ಪ್ರಯತ್ನಿಸಿದ್ದಾರೆ. ಸಂಘಟನೆಯವರ ಮನವೊಲಿಸಿದ್ದಾರೆ. ಅವರ ಕೈ ಮೀರಿದಾಗ ಲಾಠಿ ಪ್ರಹಾರ ಮಾಡಿದ್ದಾರೆ. ಈಗಾಗಲೇ ಬಂಧನಕ್ಕೆ ಒಳಗಾದವರು ಕಲ್ಲು ತೂರಾಟ ನಡೆಸಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ