Saturday, November 21, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು ಜನತೆಗೆ ಶಾಂತಿ ಸುವ್ಯವಸ್ಥೆ ಕಾಪಾಡಬೇಕು : ಹೆಚ್.ಡಿ.ಕೆ ಮನವಿ

ಮದ್ದೂರು ಜನರು ಶಾಂತಿಯಿಂದಿರಬೇಕು. ದ್ವೇಷ ಸೃಷ್ಟಿಸಿ ನೆಮ್ಮದಿಗೆ ಬೆಂಕಿ ಹಾಕುವ ದುಷ್ಟಶಕ್ತಿಗಳ ಬಗ್ಗೆ ಎಚ್ಚರ ವಹಿಸಿ. ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆದ ಕಿಡಿಗೇಡಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಂತೆ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶಾಂತಿ ಸ್ಥಾಪನೆಗೆ ಎಲ್ಲರೂ ಸಹಕಾರ ನೀಡಬೇಕು. ರಾಜ್ಯ ಸರ್ಕಾರ ಹಿಂದೂ ಸಮುದಾಯಕ್ಕೆ ಅಸಮಾಧಾನವಾಗುವ ರೀತಿಯಲ್ಲಿ ವರ್ತಿಸುತ್ತಿದೆ. ಆ ಬಗ್ಗೆ ಎಲ್ಲರೂ ಜಾಗ್ರತೆ ವಹಿಸಬೇಕು. ಯಾರೂ ಕಾನೂನು ಕೈಗೆತ್ತಿಕೊಂಡು ಶಾಂತಿ ಸುವ್ಯಸ್ಥೆಗೆ ಧಕ್ಕೆ ತರಬಾರದು ಎಂದು ವಿನಂತಿಸುತ್ತೇನೆ ಎಂದು ಅವರು ಎಕ್ಸ್ ನಲ್ಲಿ ಮನವಿ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ