Friday, November 20, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು ಘಟನೆ ಕುರಿತು ಸತ್ಯಶೋಧನ ಸಮಿತಿ ರಚನೆ : ವಿಜಯೇಂದ್ರ

ಗಣೇಶೋತ್ಸವದ ಮೇಲೆ ನಡೆದ ಕಲ್ಲು ತೂರಾಟದ ಘಟನೆಗಳು, ಗಾಯಗೊಂಡವರು, ಘಟನೆ ಹಿಂದಿನ ಶಕ್ತಿಗಳು ಹಾಗೂ ಘಟನೆಗೆ ಕಾರಣರಾದ ದುಷ್ಕರ್ಮಿಗಳ ಹಿನ್ನೆಲೆಯನ್ನು ಅರಿಯುವ ಕುರಿತು ಪಕ್ಷದ ಸತ್ಯಶೋಧನಾ ಸಮಿತಿ ರಚಿಸಲಾಗಿದ್ದು ಘಟನೆಯ ವಾಸ್ತವಾಂಶಗಳನ್ನು ಸಮಿತಿಯು ಸಂಗ್ರಹಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು.

ಬುಧವಾರ ಮದ್ದೂರಿಗೆ ಭೇಟಿ ನೀಡಿದ್ದ ಅವರು, ಲಾಠಿಚಾರ್ಜ್ ನಡೆದ ಘಟನಾ ಸ್ಥಳಕ್ಕೆ ಪಕ್ಷದ ನಿಯೋಗದೊಂದಿಗೆ ಭೇಟಿ ನೀಡಿ ಗಲಭೆಗ್ರಸ್ತ ಪ್ರದೇಶಗಳ ಬಗ್ಗೆ ವಾಸ್ತವಾಂಶಗಳನ್ನು ಕಲೆ ಹಾಕಿ ಮಾಹಿತಿ ಪಡೆದರು.

ಅಲ್ಲದೇ ಇಂದಿನ ಸಾಮೂಹಿಕ ಗಣೇಶ ವಿಸರ್ಜನಾ ಮಹೋತ್ಸವದಲ್ಲಿಯೂ ಭಾಗವಹಿಸಿದರು. ಉತ್ಸವಗಳು, ಗಣೇಶೋತ್ಸವ ಆಚರಣೆಗಳ ಮೇಲೆ ದಾಳಿ ನಡೆಸುವ ಕಿಡಿಗೇಡಿ ಮತಾಂಧರನ್ನು ಹತ್ತಿಕ್ಕುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ