Monday, November 23, 2026

ಪ್ರಾಯೋಗಿಕ ಆವೃತ್ತಿ

14 ಪ್ರಕರಣಗಳಲ್ಲಿ ಭಾಗಿ ; ನ್ಯಾಯಾಂಗ ಬಂಧನಕ್ಕೆ ಪುನೀತ್ ಕೆರೆಹಳ್ಳಿ

ಈಗಾಗಲೇ ರಾಜ್ಯದ ವಿವಿಧೆಡೆ 14 ಗಂಭೀರ ಪ್ರಕರಣಗಳಲ್ಲಿ ಆರೋಪಿತನಾಗಿರುವ ಮತ್ತು ನಿರಂತರವಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನ ಬಸವನಗುಡಿ ಪೊಲೀಸರು ಮುಂಜಾಗೃತ ಕ್ರಮವಾಗಿ ಬಂಧಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಹೆಚ್ಚಿನ ಅಪರಾಧ ಕೃತ್ಯವೆಸಗುವುದನ್ನು ತಡೆಗಟ್ಟಲು ಬಿ ಎನ್ ಎಸ್ ಸೆಕ್ಷನ್ 127 ರಡಿ  ಪ್ರಕರಣ ದಾಖಲಿಸಿಕೊಂಡು,  ಮುಂದಿನ ಕ್ರಮಕ್ಕಾಗಿ ಬೆಂಗಳೂರು ನಗರ ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಮುಂದೆ ಹಾಜರುಪಡಿಸಲಾಯಿತು.

ಇನ್ನು ಮುಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದಿಲ್ಲವೆಂದು, ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಭಂಗವನ್ನುಂಟು ಮಾಡುವುದಿಲ್ಲವೆಂದು ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಭಂಗವನ್ನುಂಟು ಮಾಡುವುದಿಲ್ಲವೆಂದು ಮುಚ್ಚಳಿಕೆಯನ್ನು ನೀಡಲು ತಿಳಿಸಿದ್ದು, ಮುಚ್ಚಳಿಯನ್ನು ನೀಡಲು ನಿರಾಕರಿಸಿದ್ದರಿಂದ ಪುನೀತ್ ಕೆರೆಹಳ್ಳಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಆದೇಶಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ