ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಗರಿಷ್ಟ ಸಾಧನೆ ಮಾಡಿದ್ದನ್ನು ಗುರುತಿಸಿ ಮಂಡ್ಯ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಸ್.ಎಸ್. ಕೋಮಲ್ ಕುಮಾರ ಅವರನ್ನು ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಇಲಾಖೆಯಿಂದ ಪ್ರಸಂಶನಾ ಪತ್ರವನ್ನು ನೀಡಿ ಅಭಿನಂದಿಸಲಾಯಿತು.
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿದ್ಯಾರ್ಥಿವೇತನ ಯೋಜನೆಯಡಿ 2024-25ನೇ ಸಾಲಿಗೆ ರಾಜ್ಯ ಮಟ್ಟದಲ್ಲಿ ಗರಿಷ್ಠ ಸಾಧನೆ ಮಾಡಿ ಅವರು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅವರ ಸಾಧನೆಯನ್ನು ಗುರುತಿಸಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರದ ಕಾರ್ಯದರ್ಶಿಗಳಾದ ಸಂಬಲ್ ಇಕ್ಬಾಲ್, ಇಲಾಖೆ ನಿರ್ದೇಶಕರಾದ ಟಿ.ರಾಘವೇಂದ್ರ, ಮಹೇಶ್ ಬಾಬು, ಜಂಟಿ ನಿರ್ದೇಶಕರಾದ ನಿಶ್ಚಲ್ ಮತ್ತು ನಟರಾಜು ಹಾಗೂ ಬೆಳವಾವಿ ಉಪನಿರ್ದೇಶಕರಾದ ಚೇತನ್ ಕುಮಾರ್ ಅವರು ಅಭಿನಂದಿಸಿದರು
ಇದೇ ಸಂದರ್ಭದಲ್ಲಿ ನೆಲದನಿ ಬಳಗದ ಅಧ್ಯಕ್ಷ ಎಂ.ಸಿ.ಲಂಕೇಶ್ ಹಾಗೂ ಪದಾಧಿಕಾರಿಗಳು ಮಂಡ್ಯ ಜಿಲ್ಲೆಯ ಜನತೆಯ ಪರವಾಗಿ ಕೋಮಲ್ ಕುಮಾರ್ ಅವರಿಗೆ ಶುಭಾಶಯ ಕೋರಿದ್ದಾರೆ.




