Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಹೇಶ್ ಜೋಷಿ ಮಂಡ್ಯ ಜನತೆಯ ಕ್ಷಮೆಯಾಚಿಸಲಿ ; ಕಾರಸವಾಡಿ ಮಹದೇವು

ಮಂಡ್ಯ ನಗರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ 2.50 ಕೋಟಿ ರೂ.ಗಳ ಲೆಕ್ಕ ನೀಡಿ, ಜಿಲ್ಲೆಯ ಜನತೆಯ ಬಹಿರಂಗ ಕ್ಷಮೆ ಯಾಚಿಸಲಿ ಎಂದು ಜಿಲ್ಲಾ ಯುವ ಪರಿಷತ್ತಿನ ಅಧ್ಯಕ್ಷ ಕಾರಸವಾಡಿ ಮಹದೇವು ಆಗ್ರಹಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.13ರಂದು ಮಂಡ್ಯ ಜಿಲ್ಲೆಗೆ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಹಿರಿಯ ಸಾಹಿತಿ ಎಚ್.ಎಸ್.ಮುದ್ದೇಗೌಡ ಅವರ ಖಾಸಗಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸುವ ಸಲುವಾಗಿ ಮಂಡ್ಯಕ್ಕೆ ಆಗಮಿಸುತ್ತಿದ್ದು, ಮೊದಲು ಕ್ಷಮೆ ಕೋರಬೇಕು ಒತ್ತಾಯಿಸಿದರು.

ಅವರು ತಮ್ಮ ಸರ್ವಾಧಿಕಾರಿ ಧೋರಣೆಯಿಂದ ಮಂಡ್ಯ ಜಿಲ್ಲೆಯ ಜನತೆಗೆ ಅವಮಾನವಾಗುವ ರೀತಿ ನಡೆದುಕೊಂಡಿದ್ದಲ್ಲದೇ, ಸಮ್ಮೇಳನದ ಜಿಲ್ಲಾ ಸಂಚಾಲಕರಿಂದ ಜಿಲ್ಲಾ ಕಸಾಪ ಪದಾಧಿಕಾರಿಗಳನ್ನು ತೀರ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭಕ್ಕೆ ಗೈರು ಹಾಜರಾಗಿದ್ದ ಮಹೇಶ್ ಜೋ‍ಷಿ, ಇದೀಗ ಖಾಸಗೀ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನೇ ವಹಿಸಲು ಮುಂದಾಗಿದ್ದಾರೆ. ಅವರು ಜಿಲ್ಲೆಯ ಜನರ ಕ್ಷಮೆ ಕೋರದಿದ್ದರೆ ಪ್ರತಿಭಟನೆಯ ಬಿಸಿ ಮುಟ್ಟಿಸಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಮಂಡ್ಯ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಸುಂಡಹಳ್ಳಿ ಮಹೇಶ್, ಮಾಜಿ ಉಪಾಧ್ಯಕ್ಷ ಎಸ್.ಮಂಜು, ರಾಜ್ಯ ಬೀದಿ ನಾಟಕಗಳ ಒಕ್ಕೂಟದ ರಾಜ್ಯ ಖಜಾಂಚಿ ಶೇಖರ್ ಹನಿಯಂಬಾಡಿ, ಕಸಾಪ ಅಜೀವ ಸದಸ್ಯ ಕೀಲಾರ ಸುರೇಶ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ