Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ನುಡಿ ಭಾರತಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ನುಡಿ ಭಾರತಿ ಸೌಹಾರ್ದ ಸಹಕಾರಿ ಸಂಘದ 5ನೇ ವಾರ್ಷಿಕ ಮಹಾಸಭೆಯನ್ನು ಸೆ.14ರ ಬೆಳಿಗ್ಗೆ 11 ಗಂಟೆಗೆ ನುಡಿಭಾರತಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎ.ಎಲ್.ಬಸವೇಗೌಡ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದಲ್ಲಿ 160 ಮಂದಿ ಷೇರುದಾರ ಸದಸ್ಯರಿದ್ದು, 280 ಷೇರುಗಳಿಗೆ ಷೇರುದಾರರಾಗ ಇಚ್ಛೆವುಳ್ಳ ಆಸಕ್ತರು ಸದಸ್ಯರಾಗಬಹುದು ಎಂದರು.

ಅಂದು ಕಾರ್ಯಕ್ರಮವನ್ನು ಮನ್‌ಮುಲ್ ಅಧ್ಯಕ್ಷ ಉಮ್ಮಡಹಳ್ಳಿ ಶಿವಕುಮಾರ್ ಉದ್ಘಾಟಿಸಲಿದ್ದು, ಸಂಘದ ಷೇರುದಾರ ಸದಸ್ಯರನ್ನು ಅಭಿನಂದಿಸಿ, 160 ಸದಸ್ಯರಿಗೆ 300 ರೂ.ಗಳಂತೆ ಷೇರು ಡಿವಿಡೆಂಟ್ ಅನ್ನು ಬಹುಮಾನವಾಗಿ ವಿತರಣೆ ಮಾಡಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಸೌಹಾರ್ದ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಟಿ.ಬಿ.ಗುರುರಾಜಶೆಟ್ಟಿ, ಉಪಾಧ್ಯಕ್ಷ ಸಿದ್ದಲಿಂಗಯ್ಯ ಉಪಸ್ಥಿತರಿರಲಿದ್ದು, ಮುಖ್ಯ ಅತಿಥಿಗಳಾಗಿ ಕರಾಸೌಸಂಸ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಬಲರಾಮು, ಚಂದ್ರಶೇಖರಯ್ಯ ಭಾಗವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಎ.ಎಲ್.ಬಸವೇಗೌಡ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಪಿ.ಸಿ.ಅರುಣ್‌ಕುಮಾರ್, ಸಿಇಓ ಡಿ.ಎಸ್.ರಂಜಿತ್‌ಕುಮಾರ್, ನಿರ್ದೇಶಕರಾದ ಎಂ.ಎಸ್.ರಘು, ಸುರೇಶ್, ಸದಸ್ಯರಾದ ಅರುಣ್, ಶಿವನಂಜಪ್ಪ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ