ಗಣೇಶ ವಿಸರ್ಜನಾ ಮೆರವಣಿಗೆ ಮೇಲಿನ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆಯಲ್ಲಿ ಮದ್ದೂರಿಗೆ ಭೇಟಿ ನೀಡಿದ್ದ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವವಿರರುದ್ಧ ಎಫ್ಐಆರ್ ದಾಖಲಾಗಿದೆ.
ಗುರುವಾರ ಪಟ್ಟಣಕ್ಕೆ ಭೇಟಿ ನೀಡಿದ್ದ ಯತ್ನಾಳ್, ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ್ದರು. ಆ ವೇಳೆ, ಅನ್ಯಕೋಮಿನ ಧರ್ಮಕ್ಕೆ ಧಕ್ಕೆ ತರುವ ಹಾಗೂ ಕೋಮುಗಳ ನಡುವೆ ವೈರತ್ವ ಉಂಟು ಮಾಡುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪಿಎಸ್ಐ ಮಂಜುನಾಥ್ ಅವರು ದೂರು ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಬಳಿಕ ಮತ್ತೋರ್ವ ಶಾಸಕರ ವಿರುದ್ಧ ಪ್ರಕರಣ ದಾಖಲಾದಂತಾಗಿದೆ




