Monday, November 23, 2026

ಪ್ರಾಯೋಗಿಕ ಆವೃತ್ತಿ

ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸದಿದ್ದರೆ ದಂಡ : ಡಾ.ಕುಮಾರ

ಡೆಂಗ್ಯೂ ಒಂದು ಸಾಂಕ್ರಾಮಿಕ ರೋಗವಾಗಿದ್ದು ಡೆಂಗ್ಯೂ ನಿಯಂತ್ರಣ ಮಾಡಲು ಸಹಕರಿಸದಿದ್ದರೆ ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡೆಂಗ್ಯೂ ನಿಯಂತ್ರಣ ಸಹಕರಿಸದವರಿಗೆ ಜುಲ್ಮಾನೆ/ದಂಡ ವಿಧಿಸುವ ಕುರಿತು ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮನೆ, ವಾಣಿಜ್ಯ ಸಂಸ್ಥೆಗಳು, ಶಾಲಾ ಕಾಲೇಜು, ಹೋಟೆಲ್, ಕಟ್ಟಡ ನಿರ್ಮಾಣ ಕಾರ್ಯ, ಪಾಳು ಬಿದ್ದ ನಿವೇಶನ, ಖಾಲಿ ನಿವೇಶನಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಎಲ್ಲಾದರೂ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವ ಸಾಧ್ಯತೆ ಇರುವ ಜಾಗಗಳು ಇದ್ದಲ್ಲಿ ಮಾಲೀಕರಿಗೆ ಸೊಳ್ಳೆಗಳ ನಿಯಂತ್ರಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ನೋಟೀಸ್ ಜಾರಿಗೊಳಿಸಿ ಎಂದು ಹೇಳಿದರು.

ನೋಟಿಸ್ ಜಾರಿ ಮಾಡಿದ ನಂತರವು ನಿರ್ದಿಷ್ಟ ಸಮಯದೊಳಗೆ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದಲಿ ಅಂತಹ ಮಾಲೀಕರಿಗೆ ದಂಡ ವಿಧಿಸಲಾಗುವುದು. ಮನೆಗಳ ಹೊರಾಂಗಣದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಕಂಡು ಬಂದರೆ ನಗರ ಪ್ರದೇಶದಲ್ಲಿ ರೂ 800, ಗ್ರಾಮೀಣ ಪ್ರದೇಶದಲ್ಲಿ ರೂ 400. ವಾಣಿಜ್ಯ ಸಂಸ್ಥೆಗಳು ಹಾಗೂ ಕಚೇರಿಗಳಲ್ಲಿ ಕಂಡು ಬಂದರೆ ನಗರ ಪ್ರದೇಶದಲ್ಲಿ ರೂ 2000, ಗ್ರಾಮೀಣ ಪ್ರದೇಶದಲ್ಲಿ ರೂ 1000. ನಿರ್ಮಾಣ ಕಾರ್ಯದಲ್ಲಿ ಕಂಡು ಬಂದರೆ ನಗರ ಪ್ರದೇಶದಲ್ಲಿ ರೂ 4000, ಗ್ರಾಮೀಣ ಪ್ರದೇಶದಲ್ಲಿ ರೂ 2000 ದಂಡವನ್ನು ವಿಧಿಸಲಾಗುವುದು ಆದಾಗ್ಯೂ ದಂಡದ ಮೊತ್ತ ಪಾವತಿಸದಿದಲ್ಲಿ ಪ್ರತಿ ದಿನಕ್ಕೆ ಶೇ 50 ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತಾಸ್ತುತ 103 ಡೆಂಗ್ಯೂ, ಚಿಕ್ಕನ್ ಗುನ್ಯ 11 ಪ್ರಕರಣಗಳು ದಾಖಲಾಗಿವೆ. ಹೆಚ್ಚಾಗಿ ವಲಸಿಗರಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚು ಕಂಡು ಬರುತ್ತಿವೆ. ಕಬ್ಬು ಕಟ್ಟಾವು ಮಾಡಲು ಸರಿಸುಮಾರು 25 ಸಾವಿರಕ್ಕೂ ಹೆಚ್ಚಿನ ಜನರು ಜಿಲ್ಲೆಗೆ ಆಗಮಿಸಿದ್ದಾರೆ. ಅವರೆಲ್ಲರಿಗೂ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಸೊಳ್ಳೆ ಪರದೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಈಗಾಗಲೇ ಸಂಭಂದ ಪಟ್ಟ ಕಾರ್ಖಾನೆಗಳಿಗೆ ಸೂಚಿಸಲಾಗಿದೆ ಎಂದರು.

ಆರೋಗ್ಯ ಇಲಾಖಾ ಅಧಿಕಾರಿಗಳು ವಲಸಿಗರಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಲಸಿಗರಿಗೆ ಸರಿಯಾದ ಮೂಲಭೂತ ಸೌಕರ್ಯ ನೀಡದಿರುವ ಕಾರ್ಖಾನೆಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿ. ಜಿಲ್ಲೆಯಲ್ಲಿ ಡೆಂಗ್ಯೂ ನಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ, ವಿಶೇಷ ಶಿಬಿರಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ತಿಳಿ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ.ಮೋಹನ್, ಸರ್ವೇಕ್ಷಣಾ ಧಿಕಾರಿ ಡಾ.ಕುಮಾರ, ಡಿ.ವಿ.ಬಿ.ಡಿ.ಸಿ ಅಧಿಕಾರಿ ಕಾಂತರಾಜು, ಆರ್.ಸಿ.ಎಚ್ ಅಧಿಕಾರಿ ಡಾ.ಕೆ.ಪಿ ಅಶ್ವತ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಬೆಟ್ಟಸ್ವಾಮಿ, ನಿವೃತ್ತ ಡಿ ಎಚ್ ಓ ಡಾ. ಟಿ.ಎನ್ ಮರೀಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ