ಹಿರಿಯ ರೈತ ಮುಖಂಡರು ಹಾಗೂ ಹನಿಯಂಬಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಹನಿಯಂಬಾಡಿ ಹೆಚ್.ಪಿ. ನಾಗರಾಜು ಹೃದಯಾಘಾತದಿಂದ ಮಂಗಳವಾರ ನಿಧನರಾಗಿರಾಗಿದ್ದಾರೆ.
ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾಗಿದ್ದರಿಂದ ಸೋಮವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.
ರೈತ ಚಳುವಳಿ ಹಾಗೂ ಕಾವೇರಿ ಚಳುವಳಿ ಸೇರಿದಂತೆ ರೈತಪರ ಹೋರಾಟಗಳಲ್ಲಿ ಸದಾ ಮುಂದಿದ್ದರು. ಗ್ರಾಮದ ವಿಧವೆಯರಿಗೆ ಮಾಸಿಕ ವೇತನ ಹಾಗೂ ವೃದ್ಧಾಪ್ಯ ವೇತನ ಹಾಗೂ ವಿಕಲಚೇತನರಿಗೆ ಮಾಸಿಕ ವೇತನ ಮಾಡಿಸಿಕೊಡುತ್ತಿದ್ದರು. ಈ ಮೂಲಕ ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿತ್ವ ಉಳ್ಳವರಾಗಿದ್ದು. ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು.
ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿ ಎಲ್ಲರಿಂದ ಮೆಚ್ಚುಗೆ ಪಡೆದಿದ್ದರು. ಇವರ ಸಾವು ಗ್ರಾಮಸ್ಥರಿಗೆ ಹಾಗೂ ರೈತ ಬಾಂಧವರಿಗೆ ತುಂಬಲಾರದ ನಷ್ಟವಾಗಿದೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮವಾದ ಹನಿಯಂಬಾಡಿ ಗ್ರಾಮದ ಜಮೀನಿನಲ್ಲಿ ಮಂಗಳವಾರ ಬೆಳಗ್ಗೆ ೧೦ ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ರೈತ ಮುಖಂಡ ಹನಿಯಂಬಾಡಿ ನಾಗರಾಜು ನಿಧನದ ಹಿನ್ನೆಲೆಯಲ್ಲಿ ಮಂಡ್ಯ ತಾಲ್ಲೂಕು ದಕ್ಷಿಣ ವಲಯದ ಪ್ರೌಢಶಾಲಾ ಸಹಶಿಕ್ಷಕರ ಸಂಘಸಂಘದ ಅಧ್ಯಕ್ಷರಾದ ಶಿವಣ್ಣಮಂಗಲ ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.




