Friday, September 20, 2024

ಪ್ರಾಯೋಗಿಕ ಆವೃತ್ತಿ

ಆದಿಕವಿ ಪಂಪನ ಕಾವ್ಯಗಳ ಕುರಿತು ವಿಚಾರ ಸಂಕಿರಣ

ಆದಿಕವಿ ಪಂಪನ ಕಾವ್ಯಗಳ ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣ ಮಂಡ್ಯ ವಿಶ್ವವಿದ್ಯಾಲಯದ ಎ.ವಿ.ಆರ್ ಸಭಾಂಗಣದಲ್ಲಿ ಆಗಸ್ಟ್ 4ರಂದು ಆಯೋಜಿಸಲಾಗಿದೆ ಎಂದು ಅನಿಕೇತನ ಪ್ರತಿಷ್ಠಾನದ ಅಧ್ಯಕ್ಷ ಡಿ.ಉಮೇಶ್ ದಡಮಹಳ್ಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಂಡ್ಯ ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗ, ಮಂಡ್ಯದ ದಿಗಂಬರ ಜೈನ ಸಮಾಜ, ಹಲಗೂರಿನ ಅನಿಕೇತನ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ಆಗಸ್ಟ್ 4 ರಂದು ಬೆಳಿಗ್ಗೆ 10 ಗಂಟೆಗೆ ನಾಡಿನ ಪ್ರಸಿದ್ದ ಸಾಹಿತಿ ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅವರು ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಮಂಡ್ಯ ವಿವಿ ಕುಲಪತಿ ಡಾ. ಪುಟ್ಟರಾಜು ವಹಿಸಲಿದ್ದಾರೆ. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶಿವಕುಮಾರ.ಸಿ ಅವರು ಪ್ರಾಸ್ತಾವಿಕ ಭಾಷಣ ಮಾಡುತ್ತಾರೆ. ಮುಖ್ಯ ಅತಿಥಿಗಳಾಗಿ ರಾಮನಗರ ಸ.ಪ್ರ.ದ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ರಾಜು ಗುಂಡಾಪುರ, ಪಿ.ಇ.ಎಸ್ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಪಾಪಣ್ಣ, ಕುಲಸಚಿವ ಡಾ.ನಾಗರಾಜು.ಜಿ.ಚೊಳ್ಳಿ, ಮಂಡ್ಯ ದಿಗಂಬರ ಜೈನ ಸಮಾಜದ ಅಧ್ಯಕ್ಷ ಶ್ರೀ ಶಾಂತಿ ಪ್ರಸಾದ್ ಉಪಸ್ಥಿತರಿರುತ್ತಾರೆ.

ಬೆಳಿಗ್ಗೆ 11 ಗಂಟೆಗೆ ಪಂಪನ ಆದಿಪುರಾಣ ಕಾವ್ಯವನ್ನು ಕುರಿತು ಹೆಸರಾಂತ ವಿದ್ವಾಂಸ ಡಾ.ಕೆ. ಅನಂತರಾಮು ಅವರು ಹಾಗೂ ಪಂಪನ ವಿಕ್ರಮಾರ್ಜುನ ವಿಜಯಂ ಕಾವ್ಯ ಕುರಿತು ಮಹಾರಾಣಿ ವಾಣಿಜ್ಯ ಕಾಲೇಜಿನ ಸಹ ಪ್ರಾಧ್ಯಾಪಕ ಪ್ರೊ.ಮೈಸೂರು ಕೃಷ್ಣಮೂರ್ತಿ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪಂಪನ ಕಾವ್ಯಗಳ ವಿಮರ್ಶೆ ಕುರಿತು ಉಪನ್ಯಾಸಕ ದಿಲೀಪ್ ಕುಮಾರ್ ಮಾತನಾಡುತ್ತಾರೆ.

ಸಮನಾಂತರ ಗೋಷ್ಠಿಯಲ್ಲಿ ಪಂಪನ ಕಾವ್ಯಗಳನ್ನು ಕುರಿತಂತೆ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಅಧ್ಯಾಪಕರುಗಳು ಪ್ರಬಂಧ ಮಂಡಿಸಲು ಅವಕಾಶವಿದೆ.

ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಬಿ.ವಿ. ವಸಂತಕುಮಾರ್ ಸಮಾರೋಪ ಭಾಷಣ ಮಾಡಲಿದ್ದಾರೆ.

ಸರ್ಕಾರಿ ಮಹಾವಿದ್ಯಾಲಯದ (ಸ್ವಾಯತ್ತ) ಪ್ರಾಂಶುಪಾಲ ಡಾ. ರವಿ ಬಿ.ಸಿ ಅವರು ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ವಿ.ಧರಣೇಂದ್ರಯ್ಯ, ಮಂಡ್ಯ ವಿವಿ ಕಲಾ ವಿಭಾಗದ ನಿರ್ದೇಶಕರಾದ ಸ್ವರ್ಣ.ಬಿ, ಸಹ ಪ್ರಾಧ್ಯಾಪಕ ಡಾ.ಜಿ. ಶಿವಣ್ಣ, ಮಂಡ್ಯ ದಿಗಂಬರ ಜೈನ ಸಮಾಜದ ಕಾರ್ಯದರ್ಶಿ ರವಿ, ಕರ್ನಾಟಕ ಜಾನಪದ ಪರಿಷತ್ತು ಮಂಡ್ಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣೇಗೌಡ ಕೀಲಾರ, ಅನಿಕೇತನ ಪ್ರತಿಷ್ಠಾನದ ಅಧ್ಯಕ್ಷ ಡಿ. ಉಮೇಶ್ ದಡಮಹಳ್ಳಿ ಉಪಸ್ಥಿತರಿರುತ್ತಾರೆ.

ವಿಚಾರ ಸಂಕಿರಣದಲ್ಲಿ ಭಾಗವಹಿಸುವ ಅಧ್ಯಾಪಕರುಗಳಿಗೆ ಅನ್ಯ ಕಾರ್ಯನಿಮಿತ್ತ ರಜಾ (OOD) ಸೌಲಭ್ಯ ಇರುತ್ತದೆ. ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸಿದ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು. ಈ ಅವಕಾಶವನ್ನು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!