Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜಿಲ್ಲಾ ಜಾಗೃತ ಸಮಿತಿ ಸದಸ್ಯರಾಗಿ ಐವರ ನೇಮಕ

ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜಿಲ್ಲಾ ಜಾಗೃತ ಸಮಿತಿ ಸದಸ್ಯರಾಗಿ ಮಂಡ್ಯ ಜಿಲ್ಲೆಯಿಂದ ಐದು ಮಂದಿ ಜಾಗೃತಿ ಸಮಿತಿ ಸದಸ್ಯರಾಗಿ ಸರ್ಕಾರ ಆದೇಶಿಸಿದೆ.

ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿಯ ಅಧ್ಯಕ್ಷ ಡೇವಿಡ್, ಕ್ಷೀರಸಾಗರ ಮಿತ್ರಕೂಟದ ಕೆ ಎಂ ಕೃಷ್ಣೇಗೌಡ ಜಾನಪದ ಅಕಾಡೆಮಿಯ ಸದಸ್ಯ ಸಿ .ಎನ್. ಮಂಜೇಶ್ ಚನ್ನಾಪುರ, ಕರ್ನಾಟಕ ಜಾನಪದ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ಚಾಮನಹಳ್ಳಿ ಮಂಜು, ಪಾಂಡವಪುರದ ಕ್ಯಾತನಹಳ್ಳಿ ಗ್ರಾಮದ ಪ್ರೊ. ಜೆ ಉಷಾರಾಣಿ ಅವರನ್ನು ಜಿಲ್ಲೆಯಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಭಾಷಾ ನೀತಿಯ ಅನುಷ್ಠಾನದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ನೋಡಿಕೊಳ್ಳಲು ಕರ್ನಾಟಕ ಸರ್ಕಾರದ ವತಿಯಿಂದ ನಾಮ ನಿರ್ದೇಶನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಆದೇಶ ಹೊರಡಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ