ಅಕ್ರಮವಾಗಿ ಗಣಿ ಗುತ್ತಿಗೆ ಪರವಾನಿಗೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಬೆಂಗಳೂರಿನ ಉದ್ಯಮಿ ಎಂ ಪಿ ವೇಣುಗೋಪಾಲ ಅವರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿತು.
ಪ್ರಕರಣವನ್ನು ಸಿಬಿಐಗೆ ವಹಿಸಬೇಕು, ಅಕ್ರಮ ಗಣಿ ಗುತ್ತಿಗೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತರಿಗೆ ನಿರ್ದೇಶನ ನೀಡಬೇಕು, ಎಲ್ಲಾ ಗುತ್ತಿಗೆ ನವೀಕರಣಗಳನ್ನು ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದರು.




