Friday, November 20, 2026

ಪ್ರಾಯೋಗಿಕ ಆವೃತ್ತಿ

ಹಿಂದಿ ದಿವಸಕ್ಕೆ ತಡೆ | ಕನ್ನಡಪರ ಹೋರಾಟಗಾರರ ಬಂಧನ ಖಂಡಿಸಿ ಕರವೇ ಪ್ರತಿಭಟನೆ

ಬೆಂಗಳೂರಿನ ವೆಸ್ಟ್ಎಂಡ್ ಹೋಟೆಲ್ ನಲ್ಲಿ ಉತ್ತರ ಭಾರತದ ಸಂಸದರು ನಡೆಸುತ್ತಿದ್ದ ಹಿಂದಿ ದಿವಸ ಆಚರಣೆಗೆ ತಡೆಯೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಹಲವು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಕರವೇ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಜೆ.ಸಿ. ವೃತ್ತದಲ್ಲಿಕರವೇ ಜಿಲ್ಲಾಧ್ಯಕ್ಷ ವೇಣು ನೇತೃತ್ವದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಖಂಡಿಸಿ ಹೋರಾಟ ಮಾಡುತ್ತಿದ್ದ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕನ್ನಡ ಪರ ಹೋರಾಟ ಮಾಡುವ ಕನ್ನಡಿಗರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ. ಕೂಡಲೇ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಮೇಲೆ ಬಲವಂತವಾಗಿ ಹಿಂದೆ ಹೇರಿಕೆ ಮಾಡಲು ಮುಂದಾಗಿದೆ. ಈ ನಡೆಯನ್ನ ಕೈ ಬಿಡಬೇಕು. ಕರ್ನಾಟಕ ರಾಜ್ಯದಲ್ಲಿ ಕನ್ನಡಿಗರೇ ಉದ್ಯೋಗ ವಂಚಿತರಾಗುತ್ತಿದ್ದಾರೆ. ಹಾಗಾಗಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಶಂಕರೇಗೌಡ, ಎಂಎಸ್ ಚಿದಂಬರ್, ಸುಜಾತಾಕೃಷ್ಣ, ಜ್ಯೋತಿ ನಾಗಣ್ಣ ಸೇರಿ ಹಲವರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ