Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಗಣತಿದಾರರಿಗೆ ಸಮೀಕ್ಷೆ ಚುರುಕುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ ತಾಲ್ಲೂಕು ವ್ಯಾಪ್ತಿಯ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಗಣತಿದಾರರು ತಮ್ಮ ಕೆಲಸವನ್ನು ಚುರುಕುಗೊಳಿಸಿ ಅಕ್ಟೋಬರ್ 7 ರೊಳಗೆ ಗಣತಿ ಕಾರ್ಯ ಪೂರ್ಣಗೊಳಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು.

ಅವರು ಇಂದು ಮಂಡ್ಯ ತಾಲ್ಲೂಕು ಬಿ.ಸಿ.ಎಂ.ಹಾಸ್ಟಲ್ ನಲ್ಲಿ ತೆರೆದಿರುವ ಕಂಟ್ರೋಲ್ ರೂಂ ಗೆ ಭೇಟಿ ನೀಡಿ ಮಾತನಾಡಿದರು. 20 ಗಣತಿದಾರರಿಗೆ ಒಬ್ಬರು ಸೂಪರ್ ವೈಸರ್ ಗಳನ್ನು ನೇಮಕ ಮಾಡಲಾಗಿದ್ದು, ಮೇಲ್ವಿಚಾರಕರು ಪ್ರತಿ ಗಣತಿದಾರರು ಪ್ರತಿ ದಿನ‌ ಕನಿಷ್ಠ 10 ಮನೆಗಳ ಸಮೀಕ್ಷೆ ಕಡ್ಡಾಯವಾಗಿ ನಡೆಸುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.

ಕಡಿಮೆ ಸಾಧನೆ ಮಾಡಿರುವ ಗಣತಿದಾರರು 10 ಕ್ಕಿಂತ ಹೆಚ್ಚು ಮನೆಗಳ ಸಮೀಕ್ಷೆ ನಡೆಸುವಂತೆ ನೋಡಿಕೊಂಡು ಅವರಿಗೆ ನೀಡಿರುವ ಗುರಿ ಸಾಧನೆಗೆ ಪ್ರೇರೇಪಿಸಿ ಎಂದರು.

ಇದೇ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಲುವಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ