Monday, November 23, 2026

ಪ್ರಾಯೋಗಿಕ ಆವೃತ್ತಿ

ಛಲವಾದಿ ನಾರಾಯಣಸ್ವಾಮಿ ಮತಾಂತರ ಉಲ್ಲೇಖಿಸಿ ಜೋಶಿಗೆ ತಿರುಗೇಟು ನೀಡಿದ ಪ್ರಿಯಾಂಕ್ ಖರ್ಗೆ

ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯು ಮತಾಂತರಕ್ಕೆ ಪ್ರೋತ್ಸಾಹಿಸುತ್ತದೆ ಎಂದಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೇ, ನಿಮ್ಮ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಕುಟುಂಬ ಸಮೇತ ಮತಾಂತರವಾಗಿದ್ದಾರೆ ಎಂದು ನಿಮ್ಮದೇ ಪಕ್ಷದವರು ತಿಳಿಸಿದ್ದರು, ಇವರ ಮತಾಂತರಕ್ಕೆ ಪ್ರೇರಣೆಯಾದ ಸಂಗತಿ ಯಾವುದು? ನಿಮ್ಮ ಪಕ್ಷದವರಿಗಾಗಿ “ಘರ್ ವಾಪಸಿ“ ಕಾರ್ಯಕ್ರಮ ಹಮ್ಮಿಕೊಳ್ಳುವರಾ, ಚಿಂತಿಸಿ! ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

nudikarnataka.com

ಕಳೆದ 2021 ರ ನವೆಂಬರ್ 7 ರಂದು ಮಾಧ್ಯಮವೊಂದರಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಚಿ.ನಾ ರಾಮು ಅವರು, ನನ್ನ ಸಹೋದರ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಸುದ್ದಿಯೊಂದು ಸುತ್ತುತ್ತಿದೆ. ಆ ಸುದ್ದಿ ನಮಗೆ ತೀವ್ರ ಅಘಾತ ತಂದಿದ್ದು, ಅವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದರು.

“>

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರೂ ಎಲ್ಲವನ್ನೂ ಜಾಣತನದಿಂದ ಮುಚ್ಚಿಟ್ಟು ಬಿಜೆಪಿ ನಡುಮನೆ ತೂರಿ ನಾಯಕರನ್ನು ವಂಚಿಸಿ, ದಿಕ್ಕುತಪ್ಪಿಸಿ ಅವರಿಗೆ ಸಂಬಂಧಪಡದ ಎಸ್ಸಿ ಮೋರ್ಚಾ ಸೇರಿದ್ದಾರೆ. ಗುಟ್ಟಾಗಿ ಪ್ರತಿ ಭಾನುವಾರ ಚರ್ಚ್ ಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಾರೆ. ಅವರು ಕ್ರೈಸ್ತ ಧರ್ಮೀಯ ಹೆಣ್ಣನ್ನು ಮದುವೆ ಆದ ನಂತರ ಮತಾಂತರವಾದವರು. ಅವರ ಮಕ್ಕಳಿಗೂ ಅದೇ ಧರ್ಮದಲ್ಲಿ ಹೆಣ್ಣು ತಂದು ಇಡೀ ಕುಟುಂಬವೇ ಕ್ರೈಸ್ತ ಧರ್ಮವನ್ನು ಅತ್ಯಂತ ಶ್ರದ್ಧೆಯಿಂದ ಅನುಸರಿಸುತ್ತಿದೆ ಎಂಬುದು ನಾರಾಯಣಸ್ವಾಮಿ ಅವರ ಮೇಲಿರುವ ಆರೋಪವಾಗಿದೆ. ಇದು ಅಕ್ಷರಶಃ ನಿಜ ಎಂದು ಅವರ ಕುಟುಂಬ, ಬಂಧು ಬಾಂಧವ ಮೂಲಗಳೂ ಹೇಳುತ್ತಿವೆ ಎಂದು ಚಿ.ನಾ ರಾಮು ಹೇಳಿದ್ದರು, ಇದರ ವರದಿಯನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಪ್ರಿಯಾಂಗ್ ಖರ್ಗೆಯವರು ಜೋಶಿಯವರಿಗೆ ಟಾಂಗ್ ನೀಡಿದ್ದಾರೆ.

ಜೋಶಿಯವರೇ, ಸಮೀಕ್ಷೆಯಿಂದ ಮತಾಂತರವಾಗಲು ಸಾಧ್ಯವೇ? ನಿಮ್ಮ ಪ್ರಕಾರ ಹಿಂದೂ ಧರ್ಮ ಅಷ್ಟೊಂದು ದುರ್ಬಲವೇ? ಜೋಶಿಯವರಿಗೆ ತಿಳಿದಿರಲಿ, ಜನರಿಗೆ ಬೇಕಿರುವುದು ಮ್ಯಾಜಿಕ್ ಮಾತುಗಳಲ್ಲ, ಲಾಜಿಕ್ ಮಾತುಗಳು! ಎಂದು ತಿವಿದಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ