Friday, November 20, 2026

ಪ್ರಾಯೋಗಿಕ ಆವೃತ್ತಿ

ಸಿಜೆಐ ಮೇಲೆ ಶೂ ಎಸೆತ ಪ್ರಕರಣ | ಆರೋಪಿ ವಕೀಲನ ವಿರುದ್ದ ಮೊದಲ ಎಫ್‌ಐಆರ್‌ ದಾಖಲು

ಸರ್ಕಾರಿ ಸೇವಕರ ಅಧಿಕೃತ ಕೃತ್ಯಕ್ಕೆ ಅಡ್ಡಿಪಡಿಸುವ ಮತ್ತು ವ್ಯಕ್ತಿಯನ್ನು ಅವಮಾನಿಸುವ ಆರೋಪದ ಮೇಲೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿ ಅಮಾನತುಗೊಂಡಿರುವ ವಕೀಲ ರಾಕೇಶ್‌ ಕಿಶೋರ್ ವಿರುದ್ಧ ಬೆಂಗಳೂರಿನ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರಿನ ವಕೀಲ ಭಕ್ತವತ್ಸಲ ಅವರು ನೀಡಿದ ದೂರಿನ ಮೇರೆಗೆ ವಿಧಾನ ಸೌಧ ಠಾಣೆಯಲ್ಲಿ ರಾಕೇಶ್‌ ಕಿಶೋರ್‌ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 132, 133 ಅಡಿ ಪ್ರಕರಣ ದಾಖಲಾಗಿದೆ. ಇದಕ್ಕೂ ಮುನ್ನ, ಹೈಕೋರ್ಟ್‌ನ ಗೋಲ್ಡನ್‌ ಜ್ಯುಬಿಲಿ ಗೇಟ್‌ ಮುಂಭಾಗ ಬೆಂಗಳೂರು ವಕೀಲರ ಸಂಘವು ಪ್ರತಿಭಟನೆ ನಡೆಸಿತ್ತು. ರಾಜ್ಯದಾದ್ಯಂತ ವಕೀಲರು ಮತ್ತು ನಾಗರಿಕ ಸಂಘಟನೆಗಳು ರಾಕೇಶ್‌ ಕಿಶೋರ್‌ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಕಳೆದ ಸೋಮವಾರ ರಾಕೇಶ್‌ ಕಿಶೋರ್‌ ನ್ಯಾಯಾಲಯ ಕಲಾಪದಲ್ಲಿ ಸಿಜೆಐ ತೊಡಗಿದ್ದ ವೇಳೆ ಅವರೆಡೆಗೆ ತನ್ನ ಶೂ ಎಸೆಯಲು ಯತ್ನಿಸಿದ್ದ. ಆದರೆ, ನ್ಯಾಯಾಲಯದ ಭದ್ರತಾ ಸಿಬ್ಬಂದಿ ಸಕಾಲಕ್ಕೆ ಮಧ್ಯಪ್ರವೇಶಿಸಿ ವಕೀಲನನ್ನು ಹೊರಗೆ ಕರೆದೊಯ್ದರು. ಹಾಗೆ ಕರೆದೊಯ್ಯುವ ವೇಳೆ ಆತ “ಸನಾತನ್‌ ಕಾ ಅಪಮಾನ್‌ ನಹೀ ಸಹೇಂಗೆ” (ಸನಾತನಕ್ಕೆ ಮಾಡುವ ಅಪಮಾನವನ್ನು ಸಹಿಸುವುದಿಲ್ಲ) ಎಂದು ಘೋಷಣೆ ಕೂಗಿದ್ದ.ಇದರ ಬೆನ್ನಿಗೇ ಸಿಜೆಐ ಅವರು “ಇದೆಲ್ಲದರಿಂದ ವಿಚಲಿತರಾಗಬೇಡಿ. ನಾನು ಸಹ ವಿಚಲಿತನಾಗುವುದಿಲ್ಲ. ಇಂತಹ ಘಟನೆಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ