ವ್ಯಕ್ತಿಯೊಬ್ಬರಿಗೆ ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಮಂಡ್ಯ ಜಿಲ್ಲೆಯ ಮದ್ದೂರಿನ ತಾಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಸಚಿನ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಗ್ಗಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಪೌತಿ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು, ಈ ಸಂದರ್ಭದಲ್ಲಿ ಪಿಡಿಓ 5000 ರೂ. ಲಂಚದ ಬೇಡಿಕೆ ಇಟ್ಟಿದ್ದರು. ನಂತರ ಶಿವಲಿಂಗಯ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೋಮವಾರ 5,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆನಂತರ ಪಿಡಿಒ ಸಚಿನ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಕುಮಾರ್ ಹಾಗೂ ಬ್ಯಾಟರಾಯನಗೌಡರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.




