Thursday, November 19, 2026

ಪ್ರಾಯೋಗಿಕ ಆವೃತ್ತಿ

ಆಗಸ್ಟ್ 7-13 ರವರೆಗೆ ಸೈಲಿಂಗ್ ಚಾಂಪಿಯನ್ ಶಿಪ್ ಆಯೋಜನೆ

ಆಗಸ್ಟ್ 07 ರಿಂದ 13 ರವರೆಗೆ ರಾಷ್ಟ್ರ ಮಟ್ಟದ ಮಲ್ಟಿ ಕ್ಲಾಸ್ ಯೂತ್ ಸೈಲಿಂಗ್ ಅಂಡ್ ಕೈಟ್ ಬೋರ್ಡ್ ಚಾಂಪಿಯನ್‌ಶಿಪ್‌ ಆಯೋಜಿಸಲಾಗಿದೆ ಎಂದು ರೇಷ್ಮೆ,ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಜಲಾಶಯದ ಉತ್ತರ ಬ್ಯಾಂಕ್ ನ ತ್ರಿಷ್ಣಾ ಸೇಲಿಂಗ್ ಕ್ಲಬ್ ಆವರಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, KRS ಹಿನ್ನೀರಿನಲ್ಲಿ ಆಗಸ್ಟ್ 07 ರಿಂದ 13 ರವರೆಗೆ ಆಯೋಜಿಸಲಾಗುತ್ತಿದೆ.

ಮಂಡ್ಯ ಜಿಲ್ಲಾಡಳಿತದ ಸಹಕಾರದೊಂದಿಗೆ, ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್(MEG) ಮತ್ತು ಜನರಲ್ ತಿಮ್ಮಯ್ಯ ರಾಷ್ಡ್ರೀಯ ಸಾಹಸ ಅಕಾಡೆಮಿ (GETHNAA) ಸಹಾಭಾಗಿತ್ವದಲ್ಲಿ ಈ ಸ್ಪರ್ಧೆ ನಡೆಯಲಿದೆ. .ದೇಶದ ಮೂಲೆ ಮೂಲೆಗಳಿಂದ 2೦೦ಕ್ಕೂ ಹೆಚ್ಚು ಸೈಲರ್ಸ್ (ನಾವಿಕರು) ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಯುವ ಸೈಲರ್ಸ್‌ಗೆ ಇದೊಂದು ಅದ್ಭುತ ಅವಕಾಶವಾಗಿದ್ದು, ತಮ್ಮ ಪ್ರತಿಭೆಯನ್ನು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೆ ಉತ್ತಮ ವೇದಿಕೆ ಆಗಿದೆ. ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯು ಕ್ಲೈಬಿಂಗ್, ಕಯಾಕಿಂಗ್ ಮತ್ತು ಕೆನೋಯಿಂಗ್ ಸೇರಿದಂತೆ ಹಲವು ಸಾಹಸಮಯ ಸ್ಪೋರ್ಟ್ಸ್ ಗಳನ್ನು ಆಯೋಜಿಸಿದ್ದು, ಸೈಲಿಂಗ್ ಕೂಡ ಒಂದಾಗಿದೆ. ಜೇತನಾ ಮೂಲಕ ಇದುವರೆಗೂ ಸಾವಿರಾರು ಗ್ರಾಮೀಣ ಯುವ ಜನತೆಗೆ ಸಾಹಸ ಕ್ರೀಡೆಗಳ ಪರಿಚಯ ಹಾಗೂ ತರಬೇತಿ ನೀಡಲಾಗಿದೆ. ಈ ಸ್ಪರ್ಧೆ ಆಯೋಜಿಸಿರುವುದರಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದರು.

ಶಾಸಕ ಸಿ.ಎಸ್. ಪುಟ್ಟರಾಜು ಅವರು ಮಾತನಾಡಿ, ಕಾರ್ಯಕ್ರಮ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂದಿನ ದಿನದಲ್ಲಿ ಆರ್ಮಿ ಟ್ರೈನಿಂಗ್ ಸೆಂಟರ್ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಇದೊಂದು ಉತ್ತಮವಾದ ಕಾರ್ಯಕ್ರಮವಾಗಿದೆ ಎಂದರು.

ಆಗಸ್ಟ್ 11 ರಂದು ದಿವಂಗತ ಡಾ. ಪುನೀತ್ ರಾಜ್ ಕುಮಾರ್ ರವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಕಾರ್ಯಕ್ರಮವನ್ನು ಶಿವರಾಜ್ ಕುಮಾರ್ ರವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಅಬಕಾರಿ ಸಚಿವ ಗೋಪಾಲಯ್ಯ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ