Friday, November 20, 2026

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಭಾರತದಲ್ಲಿ 4 ದಿನಗಳ ಕಾಲ ಭಾರೀ ಮಳೆ

ಮಾನ್ಸೂನ್ ಮಾರುತಗಳ ನಿರ್ಗಮನ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕವನ್ನೂ ಒಳಗೊಂಡಂತೆ ದಕ್ಷಿಣ ಭಾರತದಲ್ಲಿ ಅಕ್ಟೋಬರ್ 18ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕೆಲ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲೂ ಮಳೆ

ಅಂತೆಯೇ ಈ ಅವಧಿಯಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ