ಮಂಡ್ಯನಗರಕ್ಕೆ ಹೊಂದಿಕೊಂಡಂತಿರುವ ಚಿಕ್ಕ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 18 ರಂದು ಬೆಳಿಗ್ಗೆ 09 ರಿಂದ ಸಂಜೆ 5 ಗಂಟೆಯ ವರೆಗೆ ಈ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ.
ಚಿಕ್ಕಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಾದ ಶಂಕರಪುರ, ಜೈನ ಸ್ಟ್ರೀಟ್, ಬೀಡಿ ಕಾಲೋನಿ, ಜಬರ್ ಸರ್ಕಲ್, ಹೊಳಲು ವೃತ್ತ, ವಿನಾಯಕನಂದ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಾಯ ಉಂಟಾಗಲಿದೆ.
ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ. ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ.ಗೌಡಗೆರೆ. ಹೆಚ್.ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಹೆಚ್. ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ. ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಈ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




