ಕರ್ನಾಟಕ ಸಂಘದ ವತಿಯಿಂದ ವಿವಿಧ ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾರ್ಥಿ ನಗದು ಪುರಸ್ಕಾರ ಕಾರ್ಯಕ್ರಮವನ್ನು ಅ.22ರ ಬೆಳಿಗ್ಗೆ 11ಗಂಟೆಗೆ ಮಂಡ್ಯನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಜಯಪ್ರಕಾಶಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಬಿ.ಎಚ್.ಮಂಗೇಗೌಡ ಶಿಕ್ಷಣ ಪ್ರಶಸ್ತಿ, ನಂಜಮ್ಮ ಸಮಾಜ ಸೇವಾ ಪ್ರಶಸ್ತಿ, ಮೋಟೇಗೌಡ ಕೃಷಿಕ ಪ್ರಶಸ್ತಿ, ಕೆ.ಟಿ.ಶ್ರೀಕಂಠೇಗೌಡ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆಯ ಕರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನAದ ಪ್ರಶಸ್ತಿ ಪ್ರದಾನ ಮಾಡುವರು, ಲೇಖಕ ಲೋಕೇಶ್ ಚಂದಗಾಲು ಅಭಿನಂದನಾ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಎಸ್ಸಿ ಮತ್ತು ಎಸ್ಟಿ ಆಯೋಗದ ಅಧ್ಯಕ್ಷ ಎಂ.ಎಸ್.ಮೂರ್ತಿ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ ಭಾಗವಹಿಲಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು, ಗ್ರಾಮ ವಿದ್ಯಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಎಂ.ರಘು ಉಪಸ್ಥಿತರಿರುವರು ಎಂದು ವಿವರಿಸಿದರು.
ಎಂ.ಎಚ್.ಚನ್ನೇಗೌಡ ಶಿಕ್ಷಣ ಸಂಸ್ಥೆಗೆ ಬಿ.ಎಚ್.ಮಂಗೇಗೌಡ ಶಿಕ್ಷಣ ಪ್ರಶಸ್ತಿ, ಆರ್.ಲೋಕೇಶ್ ಪಟೇಲ್ ಚಾರಿಟಬಲ್ ಟ್ರಸ್ಟ್ನ ಸಂಸ್ಥಾಪಕ ಜೆ.ರಾಜಶೇಖರಯ್ಯ ಅವರಿಗೆ ನಂಜಮ್ಮ ಸಮಾಜ ಸೇವಾ ಪ್ರಶಸ್ತಿ, ಪ್ರಗತಿಪರ ಕೃಷಿಕ ಬಿಳಿಗೌಡ ಅವರಿಗೆ ಮೋಟೇಗೌಡ ಕೃಷಿಕ ಪ್ರಶಸ್ತಿ, ಚಾಮರಾಜನಗರ ಜಿಲ್ಲೆಯ ಕುದೇರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ.ಶಿವಪ್ರಕಾಶ್ ಅವರಿಗೆ ಕೆ.ಟಿ.ಶ್ರೀಕಂಠೇಗೌಡ ಶಿಕ್ಷಕ ಪ್ರಶಸ್ತಿ ಹಾಗೂ ತಲಾ 15 ಸಾವಿರ ನಗದು ಹಾಗೂ ಕೆ.ಎಲ್.ಅರುಣ್ ಸ್ಮರಣಾರ್ಥ ಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್.ಬಿಂದುಶ್ರೀ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಎಚ್.ಎಸ್.ಪಲ್ಲವಿ, ಸಿ.ಹಂಸವೇಣಿ, ಸಿ.ಜೆ.ಚೈತ್ರ ಅವರಿಗೆ ತಲಾ 5 ಸಾವಿರ ವಿದ್ಯಾರ್ಥಿ ನಗದು ಪುರಸ್ಕಾರ ನೀಲಾಗುವುದು ಎಂದು ಮಾಹಿತಿ ನೀಡಿದರು.
ಬೆಂಗಳೂರಿನ ಸಮಾಜಮುಖಿ ಪತ್ರಿಕೆ ವತಿಯಿಂದ ನ.8 ಮತ್ತು 9ರಂದು ಸಮಾಜಮುಖಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನವು ಅರಮನೆ ಮೈದಾನದ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ನಡೆಯಲಿದ್ದು, ಭಾಗವಹಿಸಲು ಆಸಕ್ತಿ ಉಳ್ಳವರು ಮುಂಚಿತವಾಗಿ ಆನ್ಲೈನ್ ನೋಂದಣಿ ಮಾಡುವುದು ಕಡ್ಡಾಯವಾಗಿದೆ ಎಂದರು.
ಎರಡು ದಿನ ಊಟದ ವ್ಯವಸ್ಥೆಗೆ 300 ರೂ ನೋದಣಿ ಶುಲ್ಕ ನಿಗದಿ ಮಾಡಲಾಗಿದೆ. ಊಟ ಸೇರಿದಂತೆ ವಸತಿಯೂ ಬೇಕಾದಲ್ಲಿ ವಿದ್ಯಾರ್ಥಿಗಳಿಗೆ 1000 ರೂ, ಹಿರಿಯರು, ಸಾಹಿತ್ಯಾಸಕ್ತರಿಗೆ 1300 ರೂ ಪಾವತಿಸಿ ನೊಂದಾಯಿಸಿಕೊಲ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಸಾಕ್ತರು ಭಾಗವಹಿಸುವಂತೆ ಇದೇ ವೇಳೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಂಘದ ಪ್ರಧಾನ ಪೋಷಕ ಕೆ.ಟಿ.ಶ್ರೀಕಂಠೇಗೌಡ, ಕಾರ್ಯದರ್ಶಿ ಲೋಕೇಶ್ ಚಂದಗಾಲು, ನಿರ್ದೇಶಕರಾದ ನಾಗಪ್ಪ, ಮೋಹನ್ ಕುಮಾರ್, ಪುಟ್ಟಸ್ವಾಮಿ ಇದ್ದರು.




