ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಸಿಎಸ್‌ಆರ್ ಅನುದಾನದಲ್ಲಿ ವಿವಿಧ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದೇಶದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಭಾರತದಲ್ಲಿ 2015 ರಿಂದ ಎಸ್‌ಬಿಐ ಫೌಂಡೇಶನ್ ಚಾಲ್ತಿಗೆ ಬಂದಿದ್ದು ಈ ಸಂಸ್ಥೆಯ ಮೂಲಕ ವಿವಿಧ ಅಭಿವೃದ್ದಿ ಸಮಾಜಮುಖಿ ಕೆಲಸಗಳನ್ನು ಕೈಗೊಳ್ಳಲಾಗುತ್ತಿದ್ದು ಪ್ರಸ್ತುತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸಕ್ಕೆ ಆರ್ಥಿಕವಾಗಿ ನೆರವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಪ್ರಸ್ತುತ ಎಸ್.ಬಿ.ಐ ಫೌಂಡೇಶನ್ ತರಗತಿವಾರು ಒಟ್ಟು 7 ಯೋಜನೆಗಳ ಅಡಿಯಲ್ಲಿ ವಿವಿಧ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಬಹುದು.
ಅವುಗಳೆಂದರೆ…..
- 1) ಶಾಲಾ ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ 2025-26
- 2) ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ
- 3) ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ
- 4) ವೈದ್ಯಕೀಯ ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ
- 5) ಐಐಟಿ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ
- 6) ಐಐಎಂ ವಿದ್ಯಾರ್ಥಿಗಳಿಗೆ ಎಸ್‌ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ
- 7) ಸಾಗರೋತ್ತರ ವಿದ್ಯಾರ್ಥಿಗಳಿಗೆ SBI ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ
ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳೇನು ?
ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು.
ವಿದ್ಯಾರ್ಥಿಯು ಪ್ರಸ್ತುತ 2025-26 ನೇ ಸಾಲಿನಲ್ಲಿ ವಿಧ್ಯಾಭ್ಯಾಸಕ್ಕೆ ಪ್ರವೇಶ ಪಡೆದಿರಬೇಕು.
ಕುಟುಂಬದ ವಾರ್ಷಿಕ ಆದಾಯವು ₹3 ಲಕ್ಷದ ಒಳಗಿರಬೇಕು.
ವಿದ್ಯಾರ್ಥಿಯು ಹಿಂದಿನ ಶೈಕ್ಷಣಿಕ ವರ್ಷದಲ್ಲಿ 75% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
ಯೋಜನೆವಾರು ನಿಗದಿಪಡಿಸಿರುವ ವಿದ್ಯಾರ್ಥಿವೇತನದ ಮೊತ್ತವೇನು ?
- 1) ಶಾಲಾ ವಿದ್ಯಾರ್ಥಿಗಳಿಗೆ – INR 15,000
- 2) ಪದವಿಪೂರ್ವ ವಿದ್ಯಾರ್ಥಿಗಳಿಗೆ – INR 75,000
- 3) ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ – INR 6,00,000
- 4) ವೈದ್ಯಕೀಯ ವಿದ್ಯಾರ್ಥಿಗಳಿಗೆ – INR 4,50,000
- 5) ಐಐಟಿ ವಿದ್ಯಾರ್ಥಿಗಳಿಗೆ – INR 2,00,000
- 6) ಐಐಎಂ ವಿದ್ಯಾರ್ಥಿಗಳಿಗೆ – INR 5,00,000
- 7) ಸಾಗರೋತ್ತರ ವಿದ್ಯಾರ್ಥಿಗಳಿಗೆ – INR 20,00,000
ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ನವೆಂಬರ್ 2025




