Friday, November 20, 2026

ಪ್ರಾಯೋಗಿಕ ಆವೃತ್ತಿ

ಕೆಪಿಟಿಸಿಎಲ್ ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಿ

ಜಿಲ್ಲೆಯಲ್ಲಿ ಕೆ.ಪಿ.ಟಿ.ಸಿ.ಎಲ್ ಸ್ಪರ್ಧಾತ್ಮಕ ಪರೀಕ್ಷೆ ಆಗಸ್ಟ್ 07 ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಉತ್ತಮ ಮೂಲಭೂತ ಸೌಕರ್ಯ ಹಾಗೂ ಪೀಠೋಪಕರಣಗಳ ವ್ಯವಸ್ಥೆ ಮಾಡಿ ಪರೀಕ್ಷೆ ಸುಗಮವಾಗಿ ನಡೆಯಲು ಸಹಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್.ನಾಗರಾಜು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೆ. ಪಿ.ಟಿ.ಸಿ.ಎಲ್ ಪರೀಕ್ಷೆಯ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಕೆ.ಪಿ.ಟಿ.ಸಿ.ಎಲ್ ಪರೀಕ್ಷೆಯನ್ನು 4,896 ಅಭ್ಯರ್ಥಿಗಳು ಬರೆಯಲಿದ್ದಾರೆ.

ಆಗಸ್ಟ್ 07 ರಂದು ಕೆ.ಪಿ.ಟಿ.ಸಿ.ಎಲ್ ಸ್ಪರ್ಧಾತ್ಮಕ ಪರೀಕ್ಷೆಯು ಬೆಳಿಗ್ಗೆ 10:30 ರಿಂದ 12:30 ಹಾಗೂ ಮಧ್ಯಾಹ್ನ 02:30 ರಿಂದ
5:30 ರವರೆಗೆ ನಡೆಯಲಿದೆ ಎಂದರು.

ಮಂಡ್ಯ ಜಿಲ್ಲೆಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾಜಿ ಪುರಸಭೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾರ್ಮೆಲ್ ಪಿಯು ಕಾಲೇಜು, ಲಕ್ಷ್ಮಿ ಜನಾರ್ದನ ಪಿಯು ಕಾಲೇಜು, ಮಾಂಡವ್ಯ ಪಿಯು ಕಾಲೇಜು, ಮಾಂಡವ್ಯ ಎಕ್ಸಲೆನ್ಸ್ ಕಾಲೇಜು, ಪಿ.ಇ. ಎಸ್ ಪಿಯು ಕಾಲೇಜು, ರೋಟರಿ ಪಿಯು ಕಾಲೇಜು, ಪಿ. ಇ.ಎಸ್.ಪದವಿ ಕಾಲೇಜು, ಸೆಂಟ್ ಜಾನ್ಸ್ ಪಿಯು ಕಾಲೇಜು ಸೇರಿದಂತೆ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ಪರೀಕ್ಷಾ ಕೆಲಸ ನಿರ್ವಹಿಸಲು ಪರೀಕ್ಷಾ ಅಧೀಕ್ಷಕರು, ಪ್ರಶ್ನೆ ಪತ್ರಿಕಾ ಪಾಲಕರು,ವಿಶೇಷ ಜಾಗೃತದಳದ ಸದಸ್ಯರು, ನೋಡಲ್ ಅಧಿಕಾರಿಗಳು,
ತ್ರಿಸದಸ್ಯ ಕಮಿಟಿಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೇ ನಡೆಸಲು ಸಹಕರಿಸಬೇಕು. ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನೇಮಕ ಮಾಡಿಲಾಗಿದೆ. ಬಹಳ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಸೂಚಿಸಿದರು.

ಸದರಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಇನ್ನಿತರ ಅಗತ್ಯ ಸೌಕರ್ಯಗಳು ಸಮಯಕ್ಕೆ ಸರಿಯಾಗಿ ಒದಗಿಸಲು ಅಗತ್ಯ ಕ್ರಮಕೈಗೊಳ್ಳಿ ಎಂದರು.

ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಹಾಗೂ ಸುಗಮವಾಗಿ ನಡೆಸಲು ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳನ್ನು ಕುರಿತು ಸವಿವರವಾದ Standard Operating Procedure (SOP) ಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಜಾರಿಗೊಳಿಸಿರುತ್ತದೆ. ಅದರಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು.

ವಾಚ್, ಮೊಬೈಲ್ ಹಾಗೂ ಇತ್ಯಾದಿ ಇಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಪರೀಕ್ಷಾ ಕೇಂದ್ರಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್. ಉಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜವರೇಗೌಡ, ಬಿಇಒಗಳು, ಪರೀಕ್ಷಾ ಕೇಂದ್ರಗಳ ಅಧೀಕ್ಷಕರುಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ