Friday, November 20, 2026

ಪ್ರಾಯೋಗಿಕ ಆವೃತ್ತಿ

ನ.2 ಕ್ಕೆ ಚಿತ್ತಾಪುರದಲ್ಲಿ ನಡೆಯಲ್ಲ ಆರೆಸ್ಸೆಸ್ ಮೆರವಣಿಗೆ ; ಮತ್ತೊಮ್ಮೆ ಶಾಂತಿಸಭೆ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ. 2 ರಂದು ಆರೆಸ್ಸೆಸ್, ಭೀಮ್ ಆರ್ಮಿ, ದಲಿತ ಪ್ಯಾಂಥರ್ಸ್ ಸೇರಿದಂತೆ ಸುಮಾರು 12 ಸಂಘಟನೆಗಳು ಮೆರವಣಿಗೆ ನಡೆಸಲು ಅವಕಾಶ ಕೇಳಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಅಂದು ಯಾವುದೇ ಮೆರವಣಿಗೆ ನಡೆಸಲು ಹೈಕೋರ್ಟ್ ಅನುಮತಿ ನೀಡಿಲ್ಲ.

ಬದಲಾಗಿ ನ.5ಕ್ಕೆ ಎಜಿ ಅವರ ಕಚೇರಿಯಲ್ಲಿ ತ್ತೊ ಎಲ್ಲ ಪಕ್ಷಕಾರರ ಶಾಂತಿ ಸಭೆ ನಡೆಸಲು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ನೇತೃತ್ವದ ಪೀಠ ಸೂಚನೆ ನೀಡಿದೆ.

ನ.5ರಂದು ಸಂಜೆ 5 ಗಂಟೆಗೆ ಎಜಿ ಅವರ ಕಚೇರಿಯಲ್ಲಿ ನಡೆಯಲಿರುವ ಸಮಾಲೋಚನಾ ಸಭೆಯಲ್ಲಿ ಎಲ್ಲ ಪಕ್ಷಕಾರರು, ಪ್ರತಿವಾದಿಗಳು, ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನ.7ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ