Tuesday, November 24, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಮನೆ ಮುಂದೆಯೇ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಆರೆಸ್ಟ್

ಶ್ರೀರಂಗಪಟ್ಟಣ ಟೌನ್ ಪೊಲೀಸರ ಕಾರ್ಯಾಚರಣೆ ಶ್ರೀನಿವಾಸ ಅಗ್ರಹಾರ ಗ್ರಾಮದಲ್ಲಿ ಮನೆಯ ಮುಂದೆ ಗಾಂಜಾ ಗಿಡ ಬೆಳೆದಿದ್ದ ಸುರೇಶ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನ ಮನೆ ಮುಂದೆಯೇ 5 ಗಾಂಜಾ ಗಿಡ ಬೆಳೆದು, ಯಾರಿಗೂ ಕಾಣದಂತೆ ಸುತ್ತಲೂ ಸೀರೆ ಕಟ್ಟಿ ಮರೆಮಾಚಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ 3 ಲಕ್ಷ ಬೆಲೆ‌ಬಾಳುವ 10 ಕೆ.ಜಿ 100 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯ ವಿರುದ್ದ NDPS ಕಾಯ್ದೆ ರೀತ್ಯ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ