ಇಂದಿನ ಯುವ ಸಮುದಾಯಕ್ಕೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ, ಆಟ ಪಾಠ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿ ನಾವು ತೊಡಗಿಸಿಕೊಳ್ಳಬೇಕು ಎಂದು ಸ್ನೇಹ ಯುವತಿ ಮತ್ತು ಮಹಿಳಾ ಮಂಡಳಿ ಅಧ್ಯಕ್ಷರಾದ ಎಂ ಸಿ ಸೌಂದರ್ಯ ತಿಳಿಸಿದರು.
ಯುವ ಸಬಲೀಕರಣ ಕ್ರೀಡಾ ಇಲಾಖೆ ಮಂಡ್ಯ. ಸರ್ಕಾರಿ ಮತ್ತು ಪಾಲಿಟೆಕ್ನಿಕ್ ಕಾಲೇಜು ದೇವಲಾಪುರ ಹ್ಯಾಂಡ್ ಪೋಸ್ಟ್, ಸ್ನೇಹ ಯುವತಿ ಮತ್ತು ಮಹಿಳಾ ಮಂಡಳಿ ಮಾದಿಹಳ್ಳಿ ಇವರ ಸಹಯೋಗದಲ್ಲಿ ನಾಗಮಂಗಲ ಪಟ್ಟಣದ ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಬ್ಲಾಕ್ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಸ್ತುತ ದಿನದಲ್ಲಿ ಕ್ರೀಡೆಯು ಪ್ರಮುಖ ಪಾತ್ರ ವಹಿಸುತ್ತದೆ ಕ್ರೀಡೆಯಿಂದ ಗ್ರಾಮೀಣ ಪ್ರದೇಶದ ಹಲವಾರು ವ್ಯಕ್ತಿಗಳು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದು ದೊಡ್ಡ ಹೆಸರು ಮಾಡಿದ್ದಾರೆ ಎಂದು ಸ್ಮರಿಸಿದರು.
ಮಂಡ್ಯ ಜಿಲ್ಲೆ ಮೈ ಭಾರತ್ ಜಿಲ್ಲಾ ಯುವ ಅಧಿಕಾರಿಶ್ರುತಿ ಎಸ್ ರವರು ಗಣ್ಯರೊಂದಿಗೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಆಶಾ ಆರ್ , ನಿವೃತ್ತ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣಗೌಡ, ಉಪನ್ಯಾಸಕ ವರುಣ್ ಕೆ.ಎಸ್., ಕ್ರೀಡಾ ಸಮನ್ವಯಾಧಿಕಾರಿ ಶಿವರಾಜು ಆರ್.ಎಸ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.




