ಅಕ್ಕ ಪಡೆ ಯೋಜನೆಗೆ ಸಂಬಂಧಿಸಿದಂತೆ 5 ಹುದ್ದೆಗಳಿಗೆ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಎನ್ಸಿಸಿ “ಸಿ” ಪ್ರಮಾಣಪತ್ರ (NCC “C” Certificate) ಹೊಂದಿರುವ 35 ರಿಂದ 45 ವಯೋಮಾನದ ಮಹಿಳಾ ಎನ್ ಸಿ ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಂಡ್ಯ ಜಿಲ್ಲೆಯ ಸ್ಥಳೀಯ ನಿವಾಸಿಯಾಗಿದ್ದು ದೈಹಿಕ ದೃಢತೆ ಹೊಂದಿರಬೇಕು ,ಶಿಫ್ಟ್ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಮಹಿಳಾ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಛೇರಿ ಹೆಚ್.ಕೆ.ವೀರಣ್ಣಗೌಡ ರಸ್ತೆ, ಮಂಡ್ಯ ಇಲ್ಲಿ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳನ್ನು ನವೆಂಬರ್ 15 ರೊಳಗಾಗಿ ಸಲ್ಲಿಸ ತಕ್ಕದು.
ಹೆಚ್ಚಿನ ಮಾಹಿತಿಗೆ ಕಛೇರಿ ದೂ.ಸಂ:221315, 227336 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




