Friday, November 20, 2026

ಪ್ರಾಯೋಗಿಕ ಆವೃತ್ತಿ

ಇಳಿ ವಯಸ್ಸಿನಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ‘ಗಡ್ಡಪ್ಪ’ ಇನ್ನಿಲ್ಲ

ವಯಸ್ಕರು ಸಿನಿಮಾಗಳಲ್ಲಿ ಮಿಂಚುವುದು ಸಾಮಾನ್ಯವಾದ ವಿಷಯ. ಆದರೆ ತನ್ನ ಇಳಿ ವಯಸ್ಸಿನಲ್ಲಿ ತಮ್ಮ ಡೈಲಾಗ್ ಗಳಿಂದ ಬೆಳ್ಳಿ ತೆರೆಯಲ್ಲಿಪ್ರಸಿದ್ದಿಯಾಗಿದ್ದ, ಮಂಡ್ಯ ತಾಲ್ಲೂಕಿನ ನೊದೆಕೊಪ್ಪಲು ಗ್ರಾಮದ ಗಡ್ಡಪ್ಪ ಬುಧವಾರ ನಿಧನರಾಗಿದ್ದಾರೆ.

ಗಡ್ಡಪ್ಪ ಅವರಿಗೆ ಕೆಲ ವರ್ಷಗಳ ಹಿಂದೆ ಪಾರ್ಶ್ವ ವಾಯು ಆಗಿತ್ತು. ಇದರಿಂದ ಚೇತರಿಸಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಚಿಕಿತ್ಸೆಗೂ ಅವರ ಬಳಿ ಹಣ ಇರಲಿಲ್ಲ. ಇದಲ್ಲದೆ ನಟನಿಗೆ ಹೃದಯ ಕಾಯಿಲೆ, ಕೆಮ್ಮು ಮತ್ತು ಉಬ್ಬಸ, ಶ್ರವಣದೋಷ ಮತ್ತು ಇತರ ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವು.

ಸರಿಯಾಗಿ 10 ವರ್ಷಗಳ ಹಿಂದೆ ತೆರೆಗೆ ಬಂದು ಸೂಪರ್ ಹಿಟ್ ಆಗಿದ್ದ ಸಿನಿಮಾ ಎಂದರೆ ಅದು ‘ತಿಥಿ’. 2015ರಲ್ಲಿ ತೆರೆಗೆ ಬಂದ ಈ ಚಿತ್ರ ಮೆಚ್ಚುಗೆ ಪಡೆಯಿತು. ಹಲವು ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡಿತು. ಅವರಿಗೆ 89 ವರ್ಷ ವಯಸ್ಸಾಗಿತ್ತು. ‘ತಿಥಿ’ ಸಿನಿಮಾದಲ್ಲಿ ಅವರು ಮಾಡಿದ್ದ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

ಗಡ್ಡಪ್ಪ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇಂದು (ನ.12) ಚಿಕಿತ್ಸೆ ಫಲಿಸದೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಅವರು ‘ತಿಥಿ’ ಸಿನಿಮಾದಲ್ಲಿ ಗಡ್ಡಪ್ಪ ಹೆಸರಿನ ಪಾತ್ರ ಮಾಡಿ ಫೇಮಸ್ ಆಗಿದ್ದರು.

‘ಗಡ್ಡಪ್ಪ’ ಪಾತ್ರವನ್ನು ನೋಡಿ ಅನೇಕರು ಮೂಕವಿಸ್ಮಿತರಾದರು. ಅವರು ತಮ್ಮ ಸಹಜ ನಟನಾ ಕೌಶಲ್ಯದಿಂದ ಜನಪ್ರಿಯರಾದರು. ಆ ಬಳಿಕ ಹಲವು ಸಿನಿಮಾಗಳಲ್ಲಿ ಚನ್ನೇಗೌಡ ಅವರು ನಟಿಸಿದ್ದರು. ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರೂ ಆರ್ಥಿಜವಾಗಿ ಸೃಧಡರಾಗಲು ಸಾಧ್ಯವಾಗಲೇ ಇಲ್ಲ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ