Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲೆಯಲ್ಲಿ ಕಳ್ಳ ಭಟ್ಟಿ ದಂಧೆಗೆ ಕಡಿವಾಣ – ಡಾ.ಕುಮಾರ

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಳ್ಳ ಭಟ್ಟಿ ದಂಧೆ ನಡೆಯುತ್ತಿಲ್ಲ, ಸೇಂದಿ ಮಾರಾಟ ಮಾಡದಂತೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಹಾಗೂ ಅತಂಹ ಜಾಗಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಹೇಳಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸೇಂದಿ ಮಾರಾಟ ಎರಡನ್ನು ನಿಲ್ಲಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 671 ಅಕ್ರಮ ಮದ್ಯ ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಸ್ಲಂ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಆಗದಂತೆ ಹಾಗೂ ಗಾಂಜಾ ಮಾರಾಟ ಮಾಡದಂತೆ ಮಾಡುವ ಬಗ್ಗೆ ಅಧಿಕಾರಿಗಳು ಹೆಚ್ಚು ಗಮನಹರಿಸಬೇಕು ಹಾಗೂ ಆ ಸ್ಥಳಗಳಿಗೆ ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಾಕೀತು ಮಾಡಿದರು.

ಕಳೆದ ವರ್ಷ 33 ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ವರ್ಷ ಆರು ಗಾಂಜಾ ಪ್ರಕರಣಗಳನ್ನು ದಾಖಲಿಸಲಾಗಿದೆ. ಅರಣ್ಯ ಪ್ರದೇಶ ಹಾಗೂ ಬೆಳೆಗಳ ನಡುವೆ ಗಾಂಜಾ ಬೆಳೆದಿರುವ ಸಾಧ್ಯತೆ ಇರುತ್ತದೆ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್ಥ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ರೈತರಿಗೆ ಗಾಂಜಾ ಬೆಳೆಯುವುದು ತಪ್ಪು ಹಾಗೂ ಅದರಿಂದ ಎದುರಿಸಬೇಕಾದ ಪರಿಣಾಮಗಳನ್ನು ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಡಿಪ್ಲೋಮಾ ಪದವಿ ಕಾಲೇಜುಗಳು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಗಾಂಜಾ ಕುರಿತಾಗಿ ಹಾಗೂ ಅದರ ದುಷ್ಪರಿಣಾಮಗಳ ಕುರಿತಾಗಿ ಅರಿವು ಮೂಡಿಸಿ. ಗ್ರಾಮ ಸಭೆಗಳಲ್ಲಿ ಜನರಿಗೆ ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟದ ಕುರಿತಾಗಿ ಅರಿವು ಮೂಡಿಸಿ. ಅಬಕಾರಿ ಇಲಾಖೆ ಸಿಬ್ಬಂದಿಗಳು ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಜಿಲ್ಲೆಯಲ್ಲಿ ಅಕ್ರಮ ಮಧ್ಯೆ ಗಾಂಜಾ ಹಾಗೂ ಡ್ರಗ್ಸ್ ನಂತಹ ಮಾದಕ ಪದಾರ್ಥಗಳು ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಅಬಕಾರಿ ಜಿಲ್ಲಾಧಿಕಾರಿ ನಾಗಶಯನ, ಡಯಟ್ ಉಪನ್ಯಾಸಕ ಚಂದ್ರಶೇಖರ್ ಸೇರಿದಂತೆ ಅಬಕಾರಿ ಇಲಾಖೆಯ ಎಲ್ಲಾ ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ