ಕಳೆದ ಮೂರು ದಿನಗಳಿಂದ ಸತತವಾಗಿ ಸುರಿದ ಮಳೆಗೆ ಮಂಡ್ಯ ತಾಲೂಕು ಬಸರಾಳು ಹೋಬಳಿಯ ಕೆಂಚನಹಳ್ಳಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ.
ಗ್ರಾಮದ ಚನ್ನೇಗೌಡ ಎಂಬವರ ಮನೆಯ ಒಂದು ಕಡೆಯ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಮಹಿಳೆ ಕೂದಲೆಳೆಯ ಅಂತರದಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮನೆಯ ಒಳಗಿದ್ದ ದವಸ,ಧಾನ್ಯ ಪಾತ್ರೆಗಳು ಸಂಪೂರ್ಣ ಹಾಳಾಗಿದೆ.
ಕೆಂಚನಹಳ್ಳಿ ಗ್ರಾಮಸ್ಥರು ಹಾಗೂ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಸ್ಥಳಕ್ಕೆ ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ಮಾಡಿ ಆದಷ್ಟು ಶೀಘ್ರ ಅವರಿಗೆ ಸೂಕ್ತ ಪರಿಹಾರ ಕೊಡಬೇಕು ಹಾಗೂ ಮನೆ ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.