Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಯುವ ರೆಡ್ ಕ್ರಾಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಮಂಡ್ಯ ಜಿಲ್ಲಾ ಶಾಖೆಯು ಮೈಸೂರು ವಿಭಾಗ ಮಟ್ಟದ 8 ಜಿಲ್ಲೆ ಮತ್ತು 10 ವಿಶ್ವವಿದ್ಯಾನಿಲಯಗಳ ವ್ಯಾಪ್ತಿಗೆ ಒಳಪಡುವ ಯುವ ರೆಡ್ ಕ್ರಾಸ್ ಘಟಕದ 150 ವಿದ್ಯಾರ್ಥಿಗಳಿಗೆ ನವೆಂಬರ್ 24 ರಿಂದ 26 ವರೆಗೆ 3 ದಿವಸದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡನಾಡಿದರು.

ಮೈಸೂರು ವಿಭಾಗ ಮಟ್ಟದ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಂಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಂದ 17 ವಿದ್ಯಾರ್ಥಿಗಳಂತೆ 136 ವಿದ್ಯಾರ್ಥಿಗಳು ಹಾಗೂ 14 ಕಾರ್ಯಕ್ರಮಾಧಿಕಾರಿಗಳು ಸೇರಿ ಒಟ್ಟು 150 ಮಂದಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದರು.

ತರಬೇತಿಗಾಗಿ ಆಗಮಿಸುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ತರಬೇತಿ ಕೇಂದ್ರ, ಎಸ್. ಬಿ ಸಮುದಾಯ ಭವನ, ಬಿಜಿಎಸ್ ಸಮುದಾಯದ ಭವನ, ಕನಕ ಸಮುದಾಯ ಭವನ, ಮಾಂಡವ್ಯ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ವಸತಿ ಇರುವ ಸ್ಥಳದಿಂದ ಕಾರ್ಯಾಗಾರ ನಡೆಯುವ ಸ್ಥಳಕ್ಕೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಸಾರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ನವೆಂಬರ್ 24 ರಿಂದ 26 ರವರೆಗಿನ ತರಬೇತಿ ಕಾರ್ಯಾಗಾರವನ್ನು ಎಸ್. ಬಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ನವೆಂಬರ್ 25 ರಂದು ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಮೂರು ದಿವಸದ ಕಾರ್ಯಗಾರದಲ್ಲಿ ಒಟ್ಟು 11 ವಿಷಯಗಳನ್ನು ಕುರಿತು 5 ಸಂಪನ್ಮೂಲ ವ್ಯಕ್ತಿಗಳ ಮೂಲಕ ವಿಚಾರ ಘೋಷ್ಠಿ ನಡೆಸಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಅತಿಥಿ ಗಣ್ಯರಿಗೆ ಮತ್ತು ಪ್ರೇಕ್ಷಕರಿಗೆ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮೂಡ ಆಯುಕ್ತರಾದ ಡಾ.ಕೃಷ್ಣಕುಮಾರ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ. ಚಲುವಯ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಪ್ರತೀಕ್ ಹೆಗ್ಡೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ