Thursday, November 19, 2026

ಪ್ರಾಯೋಗಿಕ ಆವೃತ್ತಿ

ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವ ಆಚರಣೆಗೆ ನಿರ್ಧಾರ

ಆಗಸ್ಟ್ 15ರಂದು ನಡೆಯುವ 75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀರಂಗಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದ ಮಹಾನೀಯರನ್ನು ಸ್ಮರಿಸಿಕೊಳ್ಳುವ ಸುದಿನ ಇದಾಗಿದ್ದು, ದೇಶದ ನಾಗರೀಕರಾದ ನಾವೆಲ್ಲರೂ ಸಡಗರ ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕು.

ತಾಲೂಕು ಕ್ರಿಡಾಂಗಣದಲ್ಲಿ ದಿನಾಚರಣೆಯನ್ನು ಆಚರಿಸಲು ಸಿದ್ದತೆ ಕೈಗೊಳ್ಳಲಾಗಿದ್ದು, ಆಗಷ್ಟ್ 15ರೊಳಗೆ ಕ್ರೀಡಾಂಗಣದ ದುರಸ್ಥಿ ಕಾಮಗಾರಿಯು ಪೂರ್ಣಗೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ನಾಡಗೀತೆ ಹಾಗೂ ದೇಶಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಲಿದ್ದಾರೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಾನಿಯರನ್ನು ಸನ್ಮಾನಿಸಿ ಗೌರವಿಸಲಿದ್ದು, ಕ್ಷೇತ್ರದ ಪ್ರತಿಯೊಬ್ಬ ಸಾರ್ವಜನಿಕರು ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಭಾಗವಹಿಸುವಂತೆ ಶಾಸಕ ರವೀಂದ್ರ ಶ್ರೀಕಂಠಯ್ಯ ಕೋರಿದರು.

ಪ್ರಗತಿಪರ ಸಂಘಟನೆಗಳ ಮುಖಂಡರು ಸಲಹೆ,ಸೂಚನೆ ನೀಡಿದರು.
ದಲಿತ ಮುಖಂಡ ಗಂಜಾಂ ರವಿಚಂದ್ರ,ತಾಲೂಕು ಕ್ರೀಡಾಂಗಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ಸಲಹೆ ನೀಡಿದರು.

ಉಪನ್ಯಾಸಕ ಗಿರೀಶ್ ಮಾತನಾಡಿ, ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ತಾಲೂಕಿನಲ್ಲಿ ಹಲವು ಪದವಿ ಪೂರ್ವ ಕಾಲೇಜುಗಳಲ್ಲಿನ ರಾಷ್ಟ್ರಿಯ ಸೇವಾ ಘಟಕಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರ್‌ಟಿಐ ಕಾರ್ಯಕರ್ತ ಕಿರಂಗೂರು ಪಾಪು ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಮಡಿದ ಕುಟುಂಬ ಸದಸ್ಯರನ್ನು ಕಾರ್ಯಕ್ರಮದಲ್ಲಿ ಗೌರವಿಸುವಂತೆ ಸಭೆಗೆ ಸಲಹೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಶ್ವೇತ ಎನ್.ರವೀಂದ್ರ, ಬಿಇಒ ಅನಂತರಾಜು, ತಾ.ಪಂ ಇಒ ಬಿಂಧು, ಪುರಸಭೆ ಉಪಾಧ್ಯಕ್ಷ ಕೃಷ್ಣಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ