Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಶಾಸಕರ ವಿರುದ್ದದ ಟೀಕೆಗೆ ಕ್ಷಮೆ ಕೋರಿದ ಶಿವಕುಮಾರ್

ಮಳವಳ್ಳಿ ಕ್ಷೇತ್ರದ ಶಾಸಕರು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ. ಎಂ ನರೇಂದ್ರಸ್ವಾಮಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಕುರಿತು ತಾವು ಮಾಡಿರುವ ಟೀಕೆಗಳಿಗೆ ಕ್ಷಮೆ ಕೋರುವುದಾಗಿ ಕಾಂಗ್ರೆಸ್ ಮುಖಂಡ ಎಂ ಪಿ ಶಿವಕುಮಾರ್ ತಿಳಿಸಿದ್ದಾರೆ

ಮಳವಳ್ಳಿ ಪಟ್ಟಣದ ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೆಲವರ ಪ್ರಚೋದನೆಯಿಂದಾಗಿ ತಾನು ಶಾಸಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಕುರಿತು ಅಕ್ಷೇಪಾರ್ಹ ಪದಗಳನ್ನು ಬಳಸಿ ಟೀಕೆ ಮಾಡಿದ್ದು ನನ್ನ ಈ ಹೇಳಿಕೆಯ ವಿಡಿಯೋವನ್ನು ಬಳಸಿಕೊಂಡು ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದು ನನ್ನ ಟೀಕೆ ವಿರೋಧಿಗಳಿಗೆ ಅಸ್ತ್ರವಾಗಿದ್ದು, ಈಗ ನನಗೆ ನನ್ನ ತಪ್ಪಿನ ಅರಿವಾಗಿದೆ ಎಂದು ಹೇಳಿದರು.

ಕಳೆದ 10 ವರ್ಷಗಳಿಂದ ಶಾಸಕರಾದ ನರೇಂದ್ರಸ್ವಾಮಿ ಅವರ ಕಟ್ಟಾ ಬೆಂಬಲಿಗನಾಗಿ ನಿಷ್ಠಾವಂತ ಕಾಂಗ್ರೆಸ್ ಕಾರ್ಯ ಕರ್ತನಾಗಿ ಶಾಸಕರ ಆದೇಶಗಳನ್ನು ಪಾಲಿಸುತ್ತ ಪಕ್ಷದ ಕಾರ್ಯಕ್ರಮ ಹಾಗೂ ಎಲ್ಲಾ ಚುನಾವಣೆಗಳಲ್ಲೂ ಕಾರ್ಯಕರ್ತರನ್ನು ಜನರನ್ನು ಸಂಘಟಿಸುವ ಮೂಲಕ ಪಕ್ಷದ ಬಲ ವರ್ಧನೆಗೆ ದುಡಿಯುತ್ತಿರುವ ನಾನು ಶಾಸಕರ ವಿರುದ್ಧ ಎಂದೂ ಸಹ ಮಾತನಾಡಿದವನಲ್ಲ, ಪಕ್ಷ ಹಾಗೂ ಕಾರ್ಯಕರ್ತರನ್ನು ಟೀಕಿಸಿದವನಲ್ಲ, ಆದರೆ ಮೊನ್ನೆ ಸೋಮವಾರದಂದು ಕೆಲವರ ಪ್ರಚೋದನೆಯಿಂದ ಆಡಿದ ಮಾತುಗಳು ಶಾಸಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರ ಉಂಟು ಮಾಡಿದ್ದು ಇದಕ್ಕಾಗಿ ಶಾಸಕರಲ್ಲಿ ಕ್ಷಮೆ ಯಾಚಿಸುತ್ತೇನೆ, ದಯಮಾಡಿ ನನ್ನ ತಪ್ಪನ್ನು ಮನ್ನಿಸಿ ಕ್ಷಮಿಸಬೇಕೆಂದು ಮನವಿ ಮಾಡಿದರು.

ಮುಂದೆ ಇಂತಹ ತಪ್ಪು ನನ್ನಿಂದ ಆಗದಂತೆ ಎಚ್ಚರ ವಹಿಸುವುದರ ಜೊತೆಗೆ ಎಂದಿನಂತೆ ನೀವು ನೀಡುವ ಸೂಚನೆಯಂತೆ ಪಕ್ಷದ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಹೋಗುವುದಾಗಿ ಶಾಸಕರಲ್ಲಿ ವಿನಂತಿಸಿಕೊಂಡಿದ್ದಾರೆ. ಜೊತೆಗೆ ಕಾರ್ಯಕರ್ತರಿಗೆ ಸಹ ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಕೋರಿದ ಅವರು ಎಂದಿನಂತೆ ನನ್ನನ್ನು ಪ್ರೋತ್ಸಾಹಿಸಬೇಕೆಂದು ಅವರು ಮನವಿ ಮಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ