ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ಮಂಡ್ಯ ತಾಲ್ಲೂಕು ಚೀರನಹಳ್ಳಿ ಗ್ರಾಮದ ಮಂಜುನಾಥ ಡಿ ಅವರನ್ನು ನೇಮಿಸಿ ಸಹಕಾರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಇದುವರೆಗೆ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಾಮ ನಿರ್ದೇಶಿತ ಸದಸ್ಯರಾಗಿದ್ದ ಕಂಬದಹಳ್ಳಿ ಪುಟ್ಟಸ್ವಾಮಿ ಅವರನ್ನು ಕೈ ಬಿಡಲಾಗಿದೆ.




