Thursday, November 19, 2026

ಪ್ರಾಯೋಗಿಕ ಆವೃತ್ತಿ

ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ : ಡಿ.ಕೆ.ಶಿವಕುಮಾರ್

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಎಲ್ಲ 140 ಮಂದಿ ಶಾಸಕರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ’ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು ‘ಸಂಪುಟ ಪುನರ್‌ ರಚನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಿರ್ಧರಿಸಿದ್ದಾರೆ. ಸಚಿವ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿಗಳೇ. ಹಾಗಾಗಿ ಅವರು ದೆಹಲಿಗೆ ಹೋಗಿ ನಾಯಕರನ್ನು ಭೇಟಿಯಾಗುವುದು ಸಹಜ. ಅದು ಅವರ ಹಕ್ಕು ಆಗಿದ್ದು, ತಡೆಯಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

‘ಐದು ವರ್ಷಗಳನ್ನು ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅವರಿಗೆ ನಾನು ಶುಭ ಹಾರೈಸುತ್ತೇನೆ. ನಾವೆಲ್ಲರೂ ಅವರೊಂದಿಗೆ ಕೆಲಸ ಮಾಡುತ್ತೇವೆ’ ಎಂದು ಹೇಳಿದ್ದಾರೆ.

‘ಹೈಕಮಾಂಡ್ ನಿರ್ಧಾರಕ್ಕೆ ನಾನು ಹಾಗೂ ಸಿಎಂ ಬದ್ಧರಾಗಿರುವುದಾಗಿ ಹಲವು ಸಲ ಸ್ಪಷ್ಟಪಡಿಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ