Saturday, November 21, 2026

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಜಾಮೀನು ಮಂಜೂರು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಆರೋಪಿಗೆ ಚಿನ್ನಯ್ಯನಿಗೆ ಜಾಮೀನು ಮಂಜೂರಾಗಿದೆ.

ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ