Friday, November 20, 2026

ಪ್ರಾಯೋಗಿಕ ಆವೃತ್ತಿ

ಭೀಕರ ಅಪಘಾತ | ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ದುರ್ಮರಣ

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಂಗಳವಾರ ಸಂಜೆ ಅಪಘಾತವಾಗಿದೆ. ಬೀಳಗಿ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

2012 ಬ್ಯಾಚಿನ ಅಧಿಕಾರಿಯಾಗಿದ್ದ ಬೀಳಗಿ ಅವರು ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ ಎಂದು ವರದಿಯಾಗಿದೆ. ಜೇವರ್ಗಿಯ ಗೌನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.

ಮಹಾಂತೇಶ್ ಬೀಳಗಿ ಇನ್ನೋವಾ ಕಾರಿನಲ್ಲಿ ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಅಪಘಾತ ಸಂಭವಿಸಿದೆ.

ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಂತೇಶ್ ಬೀಳಗಿ 2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು.

ನಾಯಿಯೊಂದು ರಸ್ತೆಗೆ ಅಡ್ಡಬಂದಿದ್ದನ್ನು ತಪ್ಪಿಸಲು ಯತ್ನಿಸಿದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ

ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನೆರವೇರಲಿದೆ. ಬೆಳಗಾವಿಯಲ್ಲಿನ ಹಲಗತ್ತಿಯ ಫಾರ್ಮ್ ಹೌಸ್ ನಲ್ಲಿ ಅವರ ತಾಯಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಮಹಾಂತೇಶ್ ಮತ್ತು ಇಬ್ಬರು ಸಹೋದರರ ಅಂತ್ಯಕ್ರಿಯೆಯೂ ಇಲ್ಲಿಯೇ ನಡೆಯಲಿದೆ.

ಇವರ ನಿಧನಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು, ಶಾಸಕರು ಮತ್ತು ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಮಹಾಂತೇಶ್‌ ಬೀಳಗಿ ಅವರು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇದಕ್ಕೂ ಮುನ್ನ ಅವರು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದರು. ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿತ್ತು. ಈ ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದರು.

ಗಾಯಗೊಂಡಿದ್ದ ಬೀಳಗಿ ಅವರ ಸ್ನೇಹಿತ ಈರಣ್ಣ ಸಿರಸಂಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಅಸುನೀಗಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ