Saturday, November 21, 2026

ಪ್ರಾಯೋಗಿಕ ಆವೃತ್ತಿ

ಡಿಸಿಸಿ‌ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ : ಕಾಂಗ್ರೆಸ್ ಪಕ್ಷದಿಂದ ಇಬ್ಬರ ಅಮಾನತು

ಕೆ ಆರ್ ಪೇಟೆ ಇತ್ತೀಚೆಗೆ ನೆಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪರೋಕ್ಷವಾಗಿ ಜೆಡಿಎಸ್ ಅಭ್ಯರ್ಥಿಗೆ ಮತದಾನ ಮಾಡಿದ್ದಾರೆ ಎಂದು ಸಾಬೀತಾದ ಹಿನ್ನಲೆಯಲ್ಲಿ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಚಕ್ರಪಾಣಿ ಹಾಗೂ ಪುರಸಭಾ ಸದಸ್ಯ ಕೆಬಿ ಮಹೇಶ್ ಅವರನ್ನು ಅಮಾನತು ಮಾಡಿ ಜಿಲ್ಲಾ ಕಾಂಗ್ರೇಸ್ ಘಟಕದ ಅಧ್ಯಕ್ಷ ಸಿಡಿ ಗಂಗಾಧರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ

ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಶೀಳನೆರೆ ಅಂಬರೀಶ್ ಸ್ಪರ್ಧಿಸಿದ್ದರು, ಕಾಂಗ್ರೆಸ್ ಬೆಂಬಲಿತ ನಿರ್ದೇಶಕನಾಗಿ ಮತದಾನದ ಹಕ್ಕನ್ನು ಹೊಂದಿದ್ದ ಕೆಟಿ ಚಕ್ರಪಾಣಿ ಮತದಾನದ ದಿನ ಕಾಂಗ್ರೆಸ್ ನಾಯಕರ ಮಾತಿಗೂ ಕ್ಯಾರೆ ಎನ್ನದೆ ಜೆಡಿಎಸ್ ಅಭ್ಯರ್ಥಿ ಧರಣೀಶ್ ಅವರಿಗೆ ಮತದಾನ ಮಾಡಿದ್ದರು , ಅಲ್ಲದೇ ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಹಲವರಿಗೆ ಹೇಳಿರುವುದು ವರಿಷ್ಠರ ಗಮನಕ್ಕೆ ಬಂದಿರುವುದರಿಂದ ಕೆ.ಟಿ ಚಕ್ರಪಾಣಿ ಮತ್ತು ಕೆ ಬಿ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಶಾಸಕರಿಗೆ ಟಾಂಗ್ ನೀಡಿದ ಕೈಮಗ್ಗ ಅಧ್ಯಕ್ಷ ನಾಗೇಂದ್ರಕುಮಾರ್ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಜೆಡಿಎಸ್ ಜಯಬೇರಿ ಬಾರಿಸಿದೆ, ರಾಜಕೀಯದಲ್ಲಿ ಸೋಲು ಗೆಲುವು ಸಾಮಾನ್ಯವಾಗಿದೆ ಕಾಂಗ್ರೆಸ್ ಪಕ್ಷವು ಗೆದ್ದಾಗ ಬೀಗುವುದು ಸೋತಾಗ ಕುಗ್ಗುವುದು ಯಾರನ್ನು ಹೀಯಾಳಿಸುವ ಕೆಲಸವನ್ನು ಕಾಂಗ್ರೇಸ್ ಪಕ್ಷ ಮಾಡುವುದಿಲ್ಲ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸೋಲಾಗಿದೆ ಅದನ್ನು ಸ್ವೀಕರಿಸಬೇಕು ಎಂದರು.

ಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶೀಳನೆರೆ ಅಂಬರೀಶ್, ತಾಲ್ಲೂಕು ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಕಬ್ಬಲಗೆರೆ ಪುಟ್ಟಸ್ವಾಮಿಗೌಡ, ಮಂಡ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಕಿಹೆಬ್ಬಾಳು ಟಿ.ಎನ್.ದಿವಾಕರ್, ತಾಲ್ಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್,  ಕಾಂಗ್ರೆಸ್ ಉಸ್ತುವಾರಿ ಚಿನಕುರಳಿ ರಮೇಶ್, ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಪ್ರಸನ್ನಕುಮಾರ್, ತಾಲ್ಲೂಕು ಕೆಡಿಪಿ ನಿರ್ದೇಶಕರಾದ ಬೂಕನಕೆರೆ ಮಲ್ಲಿಕಾರ್ಜುನ್, ಇಲ್ಯಾಸ್ ಪಾಷ,ಯುವಮುಖಂಡ ಕರೋಟಿ ಸುನೀಲ್,ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ