ದಿತ್ವಾ ಚಂಡಮಾರುತ ಪ್ರಭಾವದಿಂದ ವಾಯುಭಾರ ಕುಸಿತ ಉಂಟಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಮತ್ತು ಕರಾವಳಿ ಭಾಗದಲ್ಲಿ ಬುಧವಾರದಿಂದಲೇ ಮಳೆ ಆರಂಭವಾಗಿದೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಗಳಲ್ಲಿ ಉಂಟಾಗಿರುವ ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತದಿಂದ ನಿಧಾನವಾಗಿ ದಕ್ಷಿಣ-ನೈಋತ್ಯ ದಿಕ್ಕಿಗೆ ಚಲಿಸುತ್ತಿದೆ.
ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.




