Saturday, November 21, 2026

ಪ್ರಾಯೋಗಿಕ ಆವೃತ್ತಿ

ಕೋಮುವಾದಿ ಗೂಂಡಾಗಳು ಮಸೀದಿಗೆ ನುಗ್ಗಲು ಯತ್ನಿಸಿರುವುದು ಪೂರ್ವ ಯೋಜಿತ : ಎಸ್.ಡಿ.ಪಿ.ಐ

ಮಂಡ್ಯ ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿಯೊಳಗೆ ಕೋಮುವಾದಿ ಗೂಂಡಾಗಳು ನುಗ್ಗಲು ಪ್ರಯತ್ನಿಸಿರುವ ಘಟನೆ ಒಂದು ಸಾಮಾನ್ಯ ಕೃತ್ಯ ಅಲ್ಲ. ಇದೊಂದು ಪೂರ್ವಯೋಜಿತ ದಾಳಿಯಾಗಿದ್ದು, ಇದನ್ನು ತಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆರೋಪಿಸಿದೆ.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಕಾನೂನು ಸಲಹೆಗಾರ ನದೀಮ್ ಅಹಮದ್ ನಮ್ಮ ಪಕ್ಷದ ವತಿಯಿಂದ ಮುಂಚಿತವಾಗಿಯೇ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಕೊಟ್ಟರೂ ಸಹ ಯಾವುದೇ ಮುಂಜಾಗ್ರತಾ ಕ್ರಮ ಜರುಗಿಸಲಿಲ್ಲ. ಮನೆ ಮೇಲಿದ್ದ ಬಾವುಟ ಕಿತ್ತು ಹಾಕಲಾಗಿತ್ತು ಹಾಗೂ ಕಲ್ಲು ತೂರಾಟ ನಡೆದಿತ್ತು. ಆ ಸಂದರ್ಭದಲ್ಲೂ ಸಹ ಕ್ರಮಕ್ಕೆ ಆಗ್ರಹ ಮಾಡಲಾಗಿತ್ತು. ನಮ್ಮ ಆಗ್ರಹಕ್ಕೆ ಸ್ಪಂದಿಸದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹನುಮ ಜಯಂತಿಗೆ ಅವಕಾಶ ಮಾಡಿಕೊಟ್ಟರು ಎಂದು ಆಪಾದಿಸಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನಮಗೆ ರಕ್ಷಣೆ, ನ್ಯಾಯ ಸಿಗುತ್ತೆ ಎಂದು ಭರವಸೆ ಇಟ್ಟುಕೊಂಡಿತ್ತು. ಆ ಸಮುದಾಯಕ್ಕೆ ಬಹಿರಂಗವಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಅಲ್ಪಸಂಖ್ಯಾತ ಸಮುದಾಯದ ರಕ್ಷಣೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಕಿಡಿಕಾರಿದರು.

ಹನುಮ ಜಯಂತಿ ಕಾರ್ಯಕ್ರಮದ ಆಯೋಜಕರು ಮತ್ತು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೋಮುವಾದಿ ಗೂಂಡಾಗಳ ವಿರುದ್ಧ ಪ್ರಕರಣ ದಾಖಲಿಸಿ, ತಕ್ಷಣ ಎಲ್ಲರನ್ನೂ ಬಂಧಿಸಿ, ಸಮಗ್ರ ತನಿಖೆ ಮಾಡಬೇಕು ಎಂದು ಎಸ್.ಡಿ.ಪಿ.ಐ ಆಗ್ರಹಿಸುತ್ತದೆ ಎಂದರು.

ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಮುಖ್ತಾರ್ ಅಹ್ಮದ್, ಉಪಾಧ್ಯಕ್ಷ ಸಾದತ್ ಪಾಷ,ಕಾರ್ಯದರ್ಶಿ ಅತೀಕ್ ಅಹ್ಮದ್,ಮಹಮ್ಮದ್ ತಾಹೇರ್,ಮುಬಾರಕ್ ಹುಸೇನ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ